Sunday, September 20, 2026

BDA Apartments

ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ BDA JK_Adv BDA Adv
Home Front Page  ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ.

 ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ.

ಮೈಸೂರು,ಸೆಪ್ಟಂಬರ್,17,2021(www.justkannada.in): ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮೊದಲ ಬಾರಿಗೆ  ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ್ದಾರೆ.

ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾಮಠಕ್ಕೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಭೇಟಿ ನೀಡಿ  ಶ್ರೀಗಳ ಆಶೀರ್ವಾದ ಪಡೆದರು. ಬಳಿಕ ಅಲ್ಲಿಯೇ ಪ್ರಸಾದ, ಉಪಹಾರ ಸೇವನೆ ಮಾಡಿದರು. ಬಿಎಸ್ ವೈಗೆ ಸಂಸದ ಪ್ರತಾಪ್ ಸಿಂಹ, ಶಾಸಕ ಎಸ್.ಎ ರಾಮದಾಸ್, ಮಾಜಿ ಸಚಿವ ವಿಜಯ್ ಶಂಕರ್ ಸಾಥ್ ನೀಡಿದರು.

ಇನ್ನು ಮೈಸೂರಿಗೆ ಆಗಮಿಸಿದ ಬಿಎಸ್ ಯಡಿಯೂರಪ್ಪಗೆ ಪೂರ್ಣಕುಂಭ ಸ್ವಾಗತ ಕೋರಲಾಯಿತು.  ಪಕ್ಷ ಸಂಘಟನೆಗಾಗಿ ಬಿಎಸ್ ವೈ ರಾಜ್ಯಪ್ರವಾಸ ಮಾಡಲಿದ್ದಾರೆ ಎನ್ನಲಾಗಿದೆ.

Key words: Former CM- BS Yeddyurappa- visits –Mysore-suttur math