Wednesday, August 19, 2026

BDA Apartments

Home Front Page ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ- ಮಾಜಿ ಸಿಎಂ ಬಿಎಸ್ ವೈ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ- ಮಾಜಿ ಸಿಎಂ ಬಿಎಸ್ ವೈ

ಬೆಂಗಳೂರು,ಮಾರ್ಚ್,31,2026 (www.justkannada.in):  ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಎರಡೂ ಕ್ಷೇತ್ರಗಳಲ್ಲಿ ಅತಿ ಹೆಚ್ಚು ಮತಗಳ ಅಂತರದಲ್ಲಿ ಗೆಲ್ಲುತ್ತೇವೆ.  ಕರ್ನಾಟಕದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಜನ ಹಿತ ಮರೆತು ಸಿಎಂ ತುಘಲಕ್ ದರ್ಬಾರ್ ನಡೆಸುತ್ತಿದ್ದಾರೆ. ಈಗಾಗಲೇ ಅವರಿಗೆ ಅಜೀರ್ಣ ಆಗುವಷ್ಟು ಮತವಿದೆ ಮತ್ತೊಮ್ಮೆ ಚುನಾವಣೆಯಲ್ಲಿ ಗೆದ್ದರೆ ಅಧಿಕಾರದ ಮದದಿಂದ ಇನ್ನೂ ಹೆಚ್ಚು ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಂತಾಗುತ್ತದೆ.  ಕಾಂಗ್ರೆಸ್ ನಾಯಕರಿಗೆ ಪಾಠ ಕಲಿಸಲು ಬಿಜೆಪಿಗೆ ಮತ ಹಾಕಿ ಎಂದು ಮನವಿ ಮಾಡಿದರು.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಗಲಕೋಟೆಯಲ್ಲಿ ಬಿಜೆಪಿ ಪರ ಪ್ರಚಾರ ವಿಚಾರ ಕುರಿತು ಪ್ರತಿಕ್ರಿಯಿಸಿದ ಬಿಎಸ್ ಯಡಿಯೂರಪ್ಪ, ಯಾರೇ ಬಂದರೂ ಅವಕಾಶವಿದೆ. ಯತ್ನಾಳ್ ಬಂದರೆ ಸ್ವಾಗತಿಸುವೆ ಎಂದರು.

Key words: BJP, victory, by-elections, Former CM, BSY