ಕನ್ನಡ ಮತ್ತು ಇತರ ಭಾಷೆಗಳಿಗೆ ಹಿಂದಿಯಷ್ಟೇ ಸ್ಥಾನಮಾನ ನೀಡಲು ಸಾಂವಿಧಾನಿಕ ತಿದ್ದುಪಡಿ ತರಲು ಪ್ರಯತ್ನಿಸಲಿ ಮಾಜಿ ಸಿಎಂ ಹೆಚ್,ಡಿ ಕುಮಾರಸ್ವಾಮಿ…

ಬೆಂಗಳೂರು,ಸೆಪ್ಟಂಬರ್,17,2020(www.justkannada.in): ಸಂವಿಧಾನವನ್ನು ಬದಲಿಸುವ ಮಾತನಾಡುವ ಬಿಜೆಪಿ ನಾಯಕರು ಕನ್ನಡ ಮತ್ತು ಇತರ ಭಾಷೆಗಳಿಗೆ ಹಿಂದಿಯಷ್ಟೇ ಸ್ಥಾನಮಾನ ನೀಡಲು ಸಾಂವಿಧಾನಿಕ ತಿದ್ದುಪಡಿ ತರಲು ಪ್ರಯತ್ನಿಸಲಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. Former CM -H  D Kumaraswamy-  constitutional -amendment - Kannada - other languages

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕನ್ನಡವೂ ಸೇರಿ ಪ್ರಾದೇಶಿಕ ಭಾಷೆಗಳಿಗೆ ಹಿಂದಿಯಷ್ಟೇ ಸ್ಥಾನಮಾನ ನೀಡಲು ಸಾಂವಿಧಾನಿಕ ತಿದ್ದುಪಡಿ ತರಲಾಗುವುದೇ ಎಂಬ ಪ್ರಶ್ನೆಗೆ ಕೇಂದ್ರ ಇಲ್ಲವೆಂದಿದೆ. ಇದು ಭಾಷಾ ತಿರಸ್ಕಾರದ ಸಂಕೇತ. ಆದರೆ ಹಿಂದಿಯಂತೆ ಕನ್ನಡವೂ ದೇಶದ ಅಧಿಕೃತ ಭಾಷೆ. ಕನ್ನಡ ರಾಷ್ಟ್ರಭಾಷೆಯೇ. ಕೇಂದ್ರ ಸರ್ಕಾರಿ ಆಡಳಿತದಲ್ಲಿ ಕನ್ನಡ ಸೇರಿ ಇತರ ಭಾಷೆಗಳನ್ನು ಸೇರಿಸಬೇಕಷ್ಟೆ ಎಂದು ಕೇಂದ್ರ ಸರ್ಕಾರವನ್ನ ಕುಟುಕಿದ್ದಾರೆ.

ಸಂವಿಧಾನದ ಪರಿಚ್ಛೇದ 343, 344, 345ರಲ್ಲಿ ಹಿಂದಿಗೆ ಉತ್ತೇಜನ ನೀಡುವ ಅಂಶಗಳಿವೆ. ಇದೇ ನೆಪದಲ್ಲಿ ಹಿಂದಿ ಹೇರುವ ಪ್ರಯತ್ನ ಕೇಂದ್ರ ಸರ್ಕಾರಗಳಿಂದ ನಿರಂತರವಾಗಿ ನಡೆದಿದೆ. ಸಂವಿಧಾನವನ್ನು ಬದಲಿಸುವ ಮಾತನಾಡುವ ಬಿಜೆಪಿ ನಾಯಕರು ಕನ್ನಡ ಮತ್ತು ಇತರ ಭಾಷೆಗಳಿಗೆ ಹಿಂದಿಯಷ್ಟೇ ಸ್ಥಾನಮಾನ ನೀಡಲು ಸಾಂವಿಧಾನಿಕ ತಿದ್ದುಪಡಿ ತರಲು ಪ್ರಯತ್ನಿಸಲಿ ಎಂದು ಬಿಜೆಪಿ ನಾಯಕರಿಗೆ ಸಲಹೆ ನೀಡಿದ್ದಾರೆ.Former CM -H  D Kumaraswamy-  constitutional -amendment - Kannada - other languages

ಮತ್ತೊಂದು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಇತರ ಭಾಷೆಗಳಿಗೆ ಹಿಂದಿಯಷ್ಟು ಸ್ಥಾನಮಾನ ನೀಡಲು ನಿರಾಕರಿಸುತ್ತಿರುವ ಕೇಂದ್ರ ಸರ್ಕಾರ ಮತ್ತು ಅದರ ನೇತೃತ್ವ ವಹಿಸಿರುವ ಬಿಜೆಪಿ, ಹಿಂದಿಯೇತರ ರಾಜ್ಯಗಳ, ಹಿಂದಿಯೇತರ ಭಾಷಿಕರ ಸಂಸದರನ್ನೂ ಒಳಗೊಂಡು ಸರ್ಕಾರ ರಚಿಸಿದೆ ಎಂಬುದು ನೆನಪಿರಲಿ. ಎಲ್ಲ ಅಧಿಕೃತ ಭಾಷೆಗಳನ್ನು ಆಡಳಿತದಲ್ಲಿ ಜಾರಿಗೆ ತಂದು ಅವರೆಲ್ಲರ ಋಣ ತೀರಿಸುವುದು ಬಿಜೆಪಿಯ ಕರ್ತವ್ಯ ಎಂದು ಟಾಂಗ್ ನೀಡಿದ್ದಾರೆ.

ಹಾಗೆಯೇ ಕೇಂದ್ರ ಸರ್ಕಾರದ ಅಧಿಸೂಚನೆ, ಪ್ರಕಟಣೆಗಳು ಇತರೆ ಅಧಿಕೃತ ಭಾಷೆಗಳಲ್ಲಿಯೂ ಇರಬೇಕು ಎಂದು ಸುಪ್ರೀಂ ಕೋರ್ಟ್ ಇತ್ತೀಚಿಗೆ ಪ್ರಕರಣವೊಂದರ ವಿಚಾರಣೆ ವೇಳೆ ಕೇಂದ್ರಕ್ಕೆ ಸೂಚನೆ ನೀಡಿದೆ. ಅಲ್ಲದೇ, ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲರೂ, ಎಲ್ಲ ಭಾಷೆಗಳೂ ಸರಿಸಮಾನ ಎಂಬುದನ್ನು ಸರ್ಕಾರ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಚಾಟಿ ಬೀಸಿದ್ದಾರೆ.

Key words: Former CM -H  D Kumaraswamy-  constitutional -amendment – Kannada – other languages