ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲು: ಕೋಲಾರ ಭೇಟಿ ರದ್ದು.

ಬೆಂಗಳೂರು,ಆಗಸ್ಟ್,30,2023(www.jutkannada.in): ತೀವ್ರ ಜ್ವರ ಹಿನ್ನೆಲೆಯಲ್ಲಿ  ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು  ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆ ಇಂದು ಅವರ ಕೋಲಾರ ಭೇಟಿ ರದ್ದಾಗಿದೆ. ಕೋಲಾರದ ಶ್ರೀನಿವಾಸಪುರದಲ್ಲಿ ಇಂದು ಹೆಚ್,ಡಿಕೆ ಅವರಿಂದ ರೈತರ ಜಮೀನುಗಳಿಗೆ ಭೇಟಿ ಕಾರ್ಯಕ್ರಮ ನಿಗದಿಯಾಗಿತ್ತು.

ಅರಣ್ಯ ಇಲಾಖೆ ಒತ್ತುವರಿ ತೆರವು ವೇಳೆ ರೈತರ ಬೆಳೆಗಳು ನಷ್ಟವಾಗಿತ್ತು. ಈ ಪರಿಣಾಮ ರೈತರೊಂದಿಗೆ ಮಾತನಾಡಲು ಹೆಚ್​ಡಿಕೆ ಆಗಮಿಸಲಿದ್ದರು. ಆದ್ರೆ ಈಗ ಆಸ್ಪತ್ರೆಗೆ ದಾಖಲಾದ ಹಿನ್ನೆಲೆ ಕೋಲಾರ ಪ್ರವಾಸ ರದ್ದಾಗಿದೆ.

Key words: Former CM -HD Kumaraswamy -admitted – hospital