ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಕೊರೋನಾ ಸೋಂಕು: ಬೆಡ್ ಇಲ್ಲ ಎಂದ ಮಣಿಪಾಲ್ ಆಸ್ಪತ್ರೆ…

0
319

ಬೆಂಗಳೂರು,ಏಪ್ರಿಲ್,17,2021(www.justkannada.in): ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೊರೋನಾ ಸೋಂಕು ತಗಲಿದ್ದು ಚಿಕಿತ್ಸೆ ಪಡೆಯಲು ಮಣಿಪಾಲ್ ಆಸ್ಪತ್ರೆ ಸೇರಬಯಸಿದ ಅವರಿಗೆ ಬೆಡ್ ಸಿಕ್ಕಿಲ್ಲ. ಕುಮಾರಸ್ವಾಮಿಯಂತಹ ಪ್ರಭಾವಿ ನಾಯಕರಿಗೇ ಈ ಸ್ಥಿತಿ ಬಂದಿರುವಾಗ ಸೋಂಕು ತಗಲಿರುವ ಸಾಮಾನ್ಯ ಜನ ಚಿಕಿತ್ಸೆಗಾಗಿ ಬೆಡ್ ಪಡೆಯಲು ಏನು ಮಾಡಬೇಕು?ಎಂಬ ಮಾತು ಕೇಳಿ ಬರತೊಡಗಿದೆ.by,election,result,Afterwards,Rahul Gandhi,Lion,fox,Mouse,Will know,Minister,K.S.Eshwarappa

ಬಸವಕಲ್ಯಾಣ ಕ್ಷೇತ್ರದ ಉಪಚುನಾವಣೆಯ ಪ್ರಚಾರಕ್ಕೆ ಹೋಗಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಶುಕ್ರವಾರ ಸಂಜೆಯೇ ದಣಿವು ಕಾಣಿಸಿಕೊಂಡಿತ್ತು. ಹೀಗಾಗಿಯೇ ಬೆಂಗಳೂರಿಗೆ ಮರಳಿದವರು ಮನೆಗೆ ಹೋಗದೆ ಹೋಟೆಲ್ ನಲ್ಲಿ ಉಳಿದುಕೊಂಡಿದ್ದರು.ಇಂದು ಬೆಳಿಗ್ಗೆ ವೈದ್ಯರನ್ನು ಸಂಪರ್ಕಿಸಿ ತಪಾಸಣೆಗೊಳಗಾದ ಅವರಿಗೆ ಕೋವಿಡ್ ಪಾಸಿಟಿವ್ ಇರುವುದು ಧೃಢಪಟ್ಟಿದೆ.

ಹೀಗಾಗಿ ವೈದ್ಯರ ಬಳಿ ಮಾತುಕತೆ ನಡೆಸಿ ತಮ್ಮ ತೋಟದ ಮನೆಯಲ್ಲಿ ವಿಶ್ರಾಂತಿ ಪಡೆದು ಚಿಕಿತ್ಸೆ ಪಡೆಯುವುದಾಗಿ ಅವರು ಹೇಳಿದ್ದಾರಾದರೂ ವೈದ್ಯರು ಅದನ್ನೊಪ್ಪಿಲ್ಲ. ಈ ವಿಷಯದಲ್ಲಿ ರಿಸ್ಕ್ ಬೇಡ. ಹೀಗಾಗಿ ತಕ್ಷಣವೇ ಆಸ್ಪತ್ರೆಗೆ ಅಡ್ಮಿಟ್ ಆಗಿ ಎಂದು ವೈದ್ಯರು ಹೇಳಿದ್ದಾರೆ.

ಹೀಗಾಗಿ ಮಣಿಪಾಲ್ ಆಸ್ಪತ್ರೆ ಸೇರಲು ನಿರ್ಧರಿಸಿದ ಹೆಚ್.ಡಿಕೆ  ಸಂಬಂಧಿಸಿದವರನ್ನು ಸಂಪರ್ಕಿಸಿದರೆ, ಬೆಡ್ ಇಲ್ಲ ಎಂಬ ಉತ್ತರ ಸಿಕ್ಕಿದೆ. ಈ ಮಧ್ಯೆ ವಿಷಯ ತಿಳಿದ ಕೂಡಲೇ ಆರೋಗ್ಯ ಸಚಿವ ಸುಧಾಕರ್ ಅವರು ಕುಮಾರಸ್ವಾಮಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಬೆಡ್ ದೊರಕಿಸಿಕೊಡಲು ಯತ್ನಿಸಿದ್ದಾರಾದರೂ ಅದು ಫಲ ಕೊಟ್ಟಿಲ್ಲ.

ಹೀಗಾಗಿ ಕುಮಾರಸ್ವಾಮಿ ಅವರು ಮತ್ತೊಂದು ಖಾಸಗಿ ಆಸ್ಪತ್ರೆಗೆ ಫೋನು ಮಾಡಿದ್ದರ ಫಲವಾಗಿ ಬೆಡ್ ಸಿಕ್ಕಿದೆ. ಅದರೆ ಬೆಡ್ ಸಿಕ್ಕರೂ ಅವರು ತಕ್ಷಣ ಅಡ್ಮಿಟ್ ಆಗಲಾಗಿಲ್ಲ. ಬದಲಿಗೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮುಂದೆ ಇಂದು ಅವರು ಹಾಜರಾಗಲೇ ಬೇಕಿದೆ. ಆದರೆ ಕೊರೋನಾ ಸೋಂಕು ತಗಲಿರುವ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದು ಅಪಾಯ.former-cm-hd-kumaraswamy-contracted-coronavirus-no-bed-manipal-hospital

ಹೀಗಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹೆಚ್.ಡಿ ಕುಮಾರಸ್ವಾಮಿ ವಿಚಾರಣೆಗೆ ಹಾಜರಾಗಿದ್ದಾರೆ. ಹೆಚ್.ಡಿಕೆ ನ್ಯಾಯಾಲಯದ ವಿಚಾರಣೆ ಮುಗಿದ ನಂತರ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದಾರೆ. ಈ ಬಗ್ಗೆ ವಿಧಾನಪರಿಷತ್ ಸದಸ್ಯ ಎಚ್ ಎಂ ರಮೇಶಗೌಡ ಅವರು ಈ ಮಾಹಿತಿ ನೀಡಿದ್ದಾರೆ.

ENGLISH SUMMARY….

No bed at Manipal Hospital for COVID infected former CM HDK
Bengaluru, Apr. 17, 2021 (www.justkannada.in): Former Chief Minister H.D. Kumaraswamy has tested Corona positive. He intended to get admitted to the Manipal Hospital, but he was refused to be admitted due to a shortage of beds, according to sources. The situation has led to questions among the common people who have started asking when the condition of a former Chief Minister is like this, what would the common man do?
H.D. Kumaraswamy appeared to be tired on Friday evening when he had gone for the bypoll campaigning at Basavakalyana. He returned to Bengaluru and directly when to the hotel instead of his home. Today he visited the doctor and tested positive for Corona.
When he was advised to be hospitalized he contacted the Manipal Hospital where he couldn’t find a bed. His attempt to get a bed through Health Minister Dr. K. Sudhakar also did not yield any result.former-cm-hd-kumaraswamy-contracted-coronavirus-no-bed-manipal-hospital
Hence, he had to contact another private hospital where he has confirmed a bed. But he couldn’t get admitted to the hospital as he had to appear before the court concerning some case. As it is unsafe to attend the court in this condition, arrangements were made to attend the court proceedings through video conferencing. After that, he will get treatment in the hospital, as per information provided by MLC H.M. Rameshgowda.
Keywords: Former Chief Minister H.D. Kumaraswamy/ tests COVID positive/ no bed at Manipal Hospital

Key words: Former CM -HD Kumaraswamy – contracted -coronavirus – no bed – Manipal Hospital.