Sunday, October 18, 2026

Dasara Wishes

Happy Dasara
Home Front Page ಜಿಂದಾಲ್ ಗೆ ಭೂಮಿ ಪರಭಾರೆ ನಿರ್ಧಾರದಿಂದ ಹಿಂದೆ ಸರಿದ ಸರ್ಕಾರದ ನಡೆ ಬಗ್ಗೆ ಮಾಜಿ ಸಿಎಂ...

ಜಿಂದಾಲ್ ಗೆ ಭೂಮಿ ಪರಭಾರೆ ನಿರ್ಧಾರದಿಂದ ಹಿಂದೆ ಸರಿದ ಸರ್ಕಾರದ ನಡೆ ಬಗ್ಗೆ ಮಾಜಿ ಸಿಎಂ ಹೆಚ್,ಡಿ ಕುಮಾರಸ್ವಾಮಿ ವ್ಯಂಗ್ಯ…

ಬೆಂಗಳೂರು,ಮೇ,28,2021(www.justkannada.in): ಜಿಂದಾಲ್ ಗೆ ಭೂಮಿ ಪರಭಾರೆ ನಿರ್ಧಾರದಿಂದ ಹಿಂದೆ ಸರಿದ ರಾಜ್ಯ ಸರ್ಕಾರದ ನಡೆ ಬಗ್ಗೆ ಮಾಜಿ ಸಿಎಂ ಹೆಚ್,ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.jk

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ,  ಜಿಂದಾಲ್‌ ಕಂಪನಿಗೆ 3667 ಎಕರೆ ಭೂಮಿ ನೀಡಲು ನಿರ್ಧರಿಸಿದ್ದ ಬಿಜೆಪಿ ಸರ್ಕಾರ ಈಗ ತನ್ನೊಳಗಿನ ಬಂಡಾಯದಿಂದ, ಅನಿವಾರ್ಯವಾಗಿ ಹಿಂದೆ ಸರಿದಿದೆ. ರಾಜಕೀಯ ಪಕ್ಷವೊಂದು ದ್ವಿಮುಖ ಧೋರಣೆಯ ರಾಜಕಾರಣ ಮಾಡಬಾರದು ಎಂಬುದಕ್ಕೆ ಇದೊಂದು ನಿದರ್ಶನ. ಹಿಂದೆ ಮಾಡಿದ್ದರ ಪಾಪದ ಫಲವನ್ನು ಬಿಜೆಪಿ ಇಂದು ಅನುಭವಿಸುವಂತಾಗಿದೆ. ಆದರೆ, ನಷ್ಟ ಜಾಸ್ತಿಯೇ ಆಗಿದೆ ಎಂದು ವ್ಯಂಗ್ಯವಾಡಿದ್ದಾರೆ

ಜಿಂದಾಲ್‌ ಗೆ ಲೀಸ್‌ ಕಂ ಸೇಲ್‌ ಆಧಾರದಲ್ಲಿ ಭೂಮಿ ನೀಡಲಾಗಿತ್ತು. ಲೀಸ್‌ ಅವಧಿ ಮುಗಿದಿದ್ದರಿಂದ ಕ್ರಯಪತ್ರ ಮಾಡಿಕೊಡಬೇಕಾಗಿತ್ತು. ಅಷ್ಟನ್ನು ಮಾತ್ರ ಮಾಡಲು ಮುಂದಾಗಿದ್ದ ನನ್ನ ಸರ್ಕಾರದ ವಿರುದ್ಧ ಯಡಿಯೂರಪ್ಪನವರು ಸಲ್ಲದ ಆರೋಪ ಮಾಡಿದ್ದರು. ಆದರೆ ಈಗ? ಅವರು ಅಂದು ನನ್ನ ಮೇಲೆ ಮಾಡಿದ ಆರೋಪಗಳನ್ನೆಲ್ಲ ತಮ್ಮ ಮೇಲೆ ಹೊತ್ತುಕೊಳ್ಳುವಂಥಾಗಿದೆ ಎಂದು ಹೆಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

ವಿರೋಧಕ್ಕಾಗಿ ವಿರೋಧ ಮಾಡುವುದು, ವಿರೋಧ ಪಕ್ಷದಲ್ಲಿದ್ದಾಗ ವಿರೋಧಿಸಿದ್ದನ್ನೇ ಆಡಳಿತಕ್ಕೆ ಬಂದಾಗ ಕದ್ದು ಮುಚ್ಚಿ ಮಾಡುವುದು ಬಿಜೆಪಿ ‘ಸಂಸ್ಕೃತಿ’. ಬಿಜೆಪಿ ಪಾಲಿಸಿಕೊಂಡು ಬಂದ ಈ ಸಂಸ್ಕೃತಿ ಇಂದು ಅವರಿಗೆ ತಿರುಗುಬಾಣವಾಗಿದೆ. ನಾವು ಮಾಡಿದ ಕರ್ಮಗಳು ನಮ್ಮನ್ನು ಹಿಂಬಾಲಿಸಿಕೊಂಡು ಬಂದು ಪಾಠ ಕಲಿಸುತ್ತವೆ ಎಂಬುದಕ್ಕೆ ಜಿಂದಾಲ್‌ ಸಾಕ್ಷಿ ಎಂದು ಹೆಚ್.ಟಿ ಕುಮಾರಸ್ವಾಮಿ ಟೀಕಿಸಿದ್ದಾರೆ.

Key words: Former CM -HD Kumaraswamy – government –Jindal- land – decision