ಕುತೂಹಲ ಕೆರಳಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಂದ ಸಿಎಂ ಬಿಎಸ್ ವೈ ಭೇಟಿ…

 ಬೆಂಗಳೂರು,ಸೆಪ್ಟಂಬರ್,11,2020(www.justkannada.in): ರಾಜ್ಯ ರಾಜಕೀಯ ಬೆಳವಣಿಗೆಯೊಂದರಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಇಂದು ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ್ದಾರೆ.jk-logo-justkannada-logo

ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸುಮಾರು 15 ನಿಮಿಷಗಳ ಕಾಲ ಚರ್ಚಿಸಿದರು ಎನ್ನಲಾಗಿದೆ. ಮೈತ್ರಿ ಸರ್ಕಾರ ಪತನಗೊಂಡ ಬಳಿಕ ಇದೇ ಮೊದಲ ಬಾರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಹೆಚ್.ಡಿ ಕುಮಾರಸ್ವಾಮಿ ಭೇಟಿ ಮಾಡಿರುವುದು ಕುತೂಹಲ ಮೂಡಿಸಿದೆ. former-cm-hd-kumaraswamy-meet-cm-bs-yeddyurappa-discussion

ಸಿಎಂ ಬಿಎಸ್ ವೈ ಬೇಟಿ ಬಳಿಕ ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಕಳೆದ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಸಾಕಷ್ಟು ಮಳೆಯಾಗುತ್ತಿದ್ದು ಸಾಕಷ್ಟು ಹಾನಿ ಉಂಟಾಗಿದೆ. ಹೀಗಾಗಿ ಮಳೆ ಅನಾಹುತ ನಿರ್ವಹಣೆಗೆ ಅಗತ್ಯ ನೆರವು ನೀಡುವಂತೆ ಸಿಎಂಗೆ ಮನವಿ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

Key words: former CM -HD Kumaraswamy Meet- CM- BS yeddyurappa-discussion