ಕರ್ನಾಟಕದಲ್ಲಿ ಈಗ ಇರೋದು ನಮ್ಮದೇ ಸರ್ಕಾರ ಎಂದು ಹೇಳಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಬೆಂಗಳೂರು,ಜುಲೈ,29,2021(www.justkannada.in):  ರಾಜ್ಯದಲ್ಲಿ ಈಗಿರುವ ಸರ್ಕಾರ ಜನತಾ ಪರಿವಾರದ ಸರ್ಕಾರ. ಇದು ನಮ್ಮದೇ ಸರ್ಕಾರ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ,  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ನಾನು ಸ್ನೇಹಿತರು. ಅವರು ನಮ್ಮದೇ ಪರಿವಾರದಿಂದ ಬಂದಿರುವವರು. ಈಗ ರಾಜ್ಯದಲ್ಲಿ ನಡೆಯುತ್ತಿರುವುದು ಜನತಾ ಪರಿವಾರ ಸರ್ಕಾರ.  ನಾನು ಸರ್ಕಾರವನ್ನ ಅಸ್ಥಿರಗೊಳಿಸುವುದಿಲ್ಲ. ಬಿ.ಎಸ್. ಯಡಿಯೂರಪ್ಪರಿಗೂ ನಾವು ಎಲ್ಲ ಸಹಕಾರ ನೀಡಿದ್ದೆವು.  ಈಗ ಬಸವರಾಜ ಬೊಮ್ಮಾಯಿ ಸರ್ಕಾರಕ್ಕೂ ಸಹಕಾರ ನೀಡುತ್ತೇವೆ ಎಂದು ತಿಳಿಸಿದ್ದಾರೆ.

 ಹಾಗೆಯೇ ಹಿರಿಯ ಬಿಜೆಪಿ ನಾಯಕರಾಗಿದ್ದ ದಿವಂಗತ ಅನಂತಕುಮಾರ್ ಅವರ ಪುತ್ರಿ ವಿಜೇತಾ ಅವರು ಕರ್ನಾಟಕದಲ್ಲಿ  ‘ಜೆಡಿಎಸ್  ಪ್ರಬಲ ರಾಜಕೀಯ ಶಕ್ತಿಯಾಗಿದೆ’ ಎಂದು ಟ್ವೀಟ್ ಮಾಡಿರುವ ಕುರಿತು ಪ್ರತಿಕ್ರಿಯಿಸಿದ  ಎಚ್.ಡಿ.ಕುಮಾರಸ್ವಾಮಿ, ರಾಜ್ಯ ರಾಜಕಾರಣದ ಈ ಪರಿಸ್ಥಿತಿಯಲ್ಲಿ ಜೆಡಿಎಸ್​ ಬಗ್ಗೆ ಇಂತಹ ಹೇಳಿಕೆಗೆ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರ ಹೇಳಿಕೆ ಪಕ್ಷಕ್ಕೆ ಒಂದು ರೀತಿಯಲ್ಲಿ ಉತ್ಸಾಹ ತುಂಬಿದೆ. ಕರ್ನಾಟಕದಲ್ಲಿ ಜೆಡಿಎಸ್​​ ಶಕ್ತಿಯುತವಾಗಿದೆ ಎಂದು ಅವರು ಹೇಳಿರುವುದಕ್ಕೆ ಲಕ್ಷಾಂತರ ಜೆಡಿಎಸ್ ಕಾರ್ಯಕರ್ತರ ಪರವಾಗಿ ಧನ್ಯವಾದ ಅರ್ಪಿಸುತ್ತೇನೆ ಎಂದಿದ್ದಾರೆ.

Key words: Former CM -HD Kumaraswamy, – now- our – government -Karnataka