Sunday, October 11, 2026

Dasara Wishes

ಗೂಗಲ್ ಕಂಪನಿ ಜತೆ VTU ಶೈಕ್ಷಣಿಕ ಒಪ್ಪಂದ: ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಸಹಿ ...
Happy Dasara
Home Front Page ಬೆಳೆ ಸಾಲಮನ್ನಾ  ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…

ಬೆಳೆ ಸಾಲಮನ್ನಾ  ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…

ಬೆಂಗಳೂರು,ನ,4,2019(www.justkannada.in): ಬೆಳೆ ಸಾಲಮನ್ನಾ ಕುರಿತು ರೈತರಿಗೆ ಮಾಹಿತಿ ನೀಡುವ ಸಲುವಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಹಾಯವಾಣಿಯನ್ನ ಆರಂಭಿಸಿದ್ದಾರೆ.

ಈ ಬಗ್ಗೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಪ್ರತಿದಿನ ನೂರಾರು ರೈತರು ತಮ್ಮ ಬೆಳೆ ಸಾಲಮನ್ನಾ ವಿಚಾರವಾಗಿ ಮಾಹಿತಿ ಪಡೆಯಲು ನನ್ನ ಮನೆಗೆ ಬರುತ್ತಿದ್ದಾರೆ. ದೂರದೂರಿನಿಂದ ಬರುವ ರೈತರಿಗೆ ಕಷ್ಟವಾಗಬಾರದೆಂದು ನಾನು ರೈತರ ಬೆಳೆ ಸಾಲಮನ್ನಾ ಸಹಾಯವಾಣಿ ಆರಂಭಿಸಿದ್ದೇನೆ. ರೈತರು ತಮ್ಮ ಮನೆಯಿಂದಲೇ 9164305868 ನಂಬರ್ ಗೆ ಬೆಳಿಗ್ಗೆ 10ರಿಂದ  ಸಂಜೆ 5ರವರೆಗೆ ಕರೆ ಮಾಡಿ ಸಾಲಮನ್ನಾದ ವಿವರ ಪಡೆಯಬಹುದು’ ಎಂದು ಕುಮಾರಸ್ವಾಮಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ರೈತರು ಕರೆ ಮಾಡಿ ಉಪಯೋಗ ಪಡೆದುಕೊಳ್ಳುವಂತೆ  ರೈತರಿಗೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಲಹೆ  ನೀಡಿದ್ದಾರೆ.

Key words: Former CM -HD Kumaraswamy – started – helpline –loan- information.