ಎಂಟಿಬಿ ನಾಗರಾಜ್ ಗೆ ಮತ್ತೊಂದು ಶಾಕ್: ಶರತ್ ಬಚ್ಚೇಗೌಡಗೆ ಬೆಂಬಲ ಘೋಷಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ….

ಬೆಂಗಳೂರು,ನ,13,2019(www.justkannada.in):  ಸುಪ್ರೀಂಕೋರ್ಟ್ ತೀರ್ಪಿನಿಂದ ನಿರಾಳರಾಗಿದ್ದ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಗೆ ಮತ್ತೊಂದು ಶಾಕಿಂಗ್ ನ್ಯೂಸ್ ಬಂದಿದೆ. ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿ ವಿರುದ್ದ ಬಂಡಾಯವೆದ್ದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವ ಶರತ್ ಬಚ್ಚೇಗೌಡಗೆ ಜೆಡಿಎಸ್ ಬೆಂಬಲ ಘೋಷಣೆ ಮಾಡಿದ್ದಾರೆ.

ಹೊಸಕೋಟೆಯಲ್ಲಿ ಶರತ್‌ ಬಚ್ಚೆಗೌಡಗೆ ಬೆಂಬಲ ನೀಡುವುದಾಗಿ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ  ಘೋಷಣೆ ಮಾಡಿದ್ದಾರೆ. ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ  ಹೆಚ್.ಡಿ ಕುಮಾರಸ್ವಾಮಿ, ನಮ್ಮ ಅವಶ್ಯಕತೆ ಇದ್ದರೆ ಹೊಸಕೋಟೆಯಲ್ಲಿ ಪಕ್ಷೇತರರಾಗಿ ಕಣಕ್ಕೆ ಇಳಿಯುವ ಶರತ್‌‌‌ ಬಚ್ಚೆಗೌಡರಿಗೆ ಬೆಂಬಲ ನೀಡುತ್ತೇವೆ. ಇನ್ನು ಜೆಡಿಎಸ್ 14 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ತಿಳಿಸಿದರು.

 ಇನ್ನು ಹೊಸಕೋಟೆ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಅನರ್ಹ ಶಾಸಕ ಎಂಟಿಬಿ ನಾಗರಾಜ್‌  ಸಿಗುವ ಸಾಧ್ಯತೆ ಹಿನ್ನೆಲೆ ತನಗೆ ಟಿಕಟ್ ಕೈತಪ್ಪುವ ಹಿನ್ನೆಲೆ ಚಿಕ್ಕಬಳ್ಳಾಪುರ ಸಂಸದ ಬಚ್ಚೆಗೌಡ ಅವರ ಪುತ್ರ ಶರತ್‌ ಬಚ್ಚೆಗೌಡ ಅವರು ಪಕ್ಷೇತರಾಗಿ ಕಣಕ್ಕೆ ಇಳಿಯಲಿದ್ದಾರೆ.

Key words: Former CM -HD Kumaraswamy -support -Sharath Bachegowda-hosakote by-election