ನಾಳೆ ಸಾರ್ವಜನಿಕರೊಂದಿಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿಡಿಯೋ ಸಂವಾದ…?

ಬೆಂಗಳೂರು,ಜು,21,2020(www.justkannada.in):  ಸಿಎಂ ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ರಚನೆಯಾಗಿದ್ದ ಸಮ್ಮಿಶ್ರ ಸರ್ಕಾರ ಪತನವಾಗಿ ಒಂದು ವರ್ಷವಾದ ಹಿನ್ನೆಲೆ ನಾಳೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಾರ್ವಜನಿಕರ ಜತೆ ವಿಡಿಯೋ ಸಂವಾದ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

2018ರ ವಿಧಾನಸಭೆ ಚುನಾವಣೆ ನಂತರ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಮಾಡಿಕೊಂಡು ಹೆಚ್.ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿತ್ತು. ಹೆಚ್.ಡಿ ಕುಮಾರಸ್ವಾಮಿ ಸಿಎಂ ಆಗಿ ಸುಮಾರು ಒಂದು ವರ್ಷಕ್ಕೂ ಹೆಚ್ಚು ಕಾಲ ಅಧಿಕಾರ ನಡೆಸಿದ್ದರು.jk-logo-justkannada-logo

ನಂತರ 17 ಶಾಸಕರ ರಾಜೀನಾಮೆಯಿಂದಾಗಿ ಸಮ್ಮಿಶ್ರ ಸರ್ಕಾರ ಪತನಗೊಂಡು ಬಿಎಸ್ ಯತಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿತು. ಸಮ್ಮಿಶ್ರ ಸರ್ಕಾರ ಪತನವಾಗಿ ಒಂದು ವರ್ಷ ಹಿನ್ನೆಲೆ ನಾಳೆ ಸಾರ್ವಜನಿಕರೊಂದಿಗೆ ಹೆಚ್.ಡಿ ಕುಮಾರಸ್ವಾಮಿ ವಿಡಿಯೋ ಸಂವಾದ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಇನ್ನು ಈ ವೇಳೆ ಬಿಜೆಪಿ ಸರ್ಕಾರದ ಕಾರ್ಯವೈಖರಿ ಮತ್ತು ಕೊರೋನಾ ಪರಿಸ್ಥಿತಿ ಬಗ್ಗೆ ಚರ್ಚಿಸಲಿದ್ದಾರೆ ಎನ್ನಲಾಗಿದೆ.former-cm-hd-kumaraswamy-video-conversation-public-tomorrow

Key words: Former CM -HD Kumaraswamy -video conversation – public -tomorrow.