Monday, August 10, 2026

BDA Apartments

Home Front Page ಬಂದಿಖಾನೆ ಎಡಿಜಿಪಿ ಅಲೋಕ್ ಮೋಹನ್ ವಿರುದ್ಧ ಮಾಜಿ ಸಿಎಂ ಎಚ್ಡಿಕೆ ಆಕ್ರೋಶ

ಬಂದಿಖಾನೆ ಎಡಿಜಿಪಿ ಅಲೋಕ್ ಮೋಹನ್ ವಿರುದ್ಧ ಮಾಜಿ ಸಿಎಂ ಎಚ್ಡಿಕೆ ಆಕ್ರೋಶ

ಮೈಸೂರು, ಏಪ್ರಿಲ್ 24, 2020 (www.justkannada.in): ಪಾದರಾಯನಪುರ ಪ್ರಕರಣದಲ್ಲಿ ಬಂಧಿತರನ್ನು ರಾಮನಗರ ಜೈಲಿಗೆ ಸ್ಥಳಾಂತರಿಸುವ ಬಂದಿಖಾನೆ ಎಡಿಜಿಪಿ ಅಲೋಕ್ ಮೋಹನ್ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ಗರಂ ಆಗಿದ್ದಾರೆ.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು, ಅಲೋಕ್ ಮೋಹನ್ ನನ್ನ ಮೇಲಿನ ದ್ವೇಷಕ್ಕೆ ಈ ರೀತಿ ಮಾಡಿದ್ದಾರೆ. ನನ್ನ ಮೇಲಿನ ಕೋಪಕ್ಕೆ ನನ್ನ ಜನರಿಗೆ ತೊಂದರೆ ಕೊಟ್ಟಿದ್ದಾರೆ. ಈ ಬಗ್ಗೆ ತನಿಖೆ ಆಗಲೇಬೇಕು ಎಂದು ಆಗ್ರಹಿಸಿದ್ದಾರೆ.

ನಾನೀಗಾಗಲೇ ಸಿಎಂ ಹಾಗೂ ಗೃಹ ಸಚಿವರಿಗೆ ಹೇಳಿದ್ದೇನೆ. ನಾನು ಸಿಎಂ ಆಗಿದ್ದ ಅವಧಿಯಲ್ಲಿ ಅಲೋಕ್ ಮೋಹನ್ ಬೆಂಗಳೂರು ಕಮಿಷನರ್ ಹುದ್ದೆ ಮೇಲೆ ಕಣ್ಣಿಟ್ಟಿದ್ದರು. ಈತನ ಇತಿಹಾಸ ತಿಳಿದೇ ನಾನು ಅವಕಾಶ ಕೊಟ್ಟಿರಲಿಲ್ಲ. ಇಂತಹ ಅಧಿಕಾರಿಗಳಿಂದಲೇ ಸರ್ಕಾರ ಸಾರ್ವಜನಿಕವಾಗಿ ಪದೇ ಪದೇ ಮುಜುಗರ ಅನುಭವಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.