ಬಿಜೆಪಿಯ ‘ಪೇಸಿಎಸ್​’ ಅಭಿಯಾನದ ಬಗ್ಗೆ ವ್ಯಂಗ್ಯವಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್.

ಹುಬ್ಬಳ್ಳಿ,ಆಗಸ್ಟ್,12,2023(www.justkannada.in): ಕೃಷಿ ಸಚಿವ ಚಲುವರಾಯಸ್ವಾಮಿ ವಿರುದ್ಧ ಬಿಜೆಪಿ ಆರಂಭಿಸಿದ್ಧ ಪೇಸಿಎಸ್ ಅಭಿಯಾನದ ಬಗ್ಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವ್ಯಂಗ್ಯವಾಡಿದ್ದಾರೆ.

ಈ ಕುರಿತು ಮಾತನಾಡಿದ ಜಗದೀಶ್ ಶೆಟ್ಟರ್, ಇದು ಕಾಂಗ್ರೆಸ್ ಪಕ್ಷದ ಕಾರ್ಬನ್ ಕಾಪಿ. ‘ಪೇ ಸಿಎಸ್’ಗೆ ಅರ್ಥವೇ ಇಲ್ಲ, ಜನ‌ರು ಇದನ್ನು ನಂಬುವುದಿಲ್ಲ. ಕಾಂಗ್ರೆಸ್​ನವರು ಮಾಡಿದ್ದನ್ನೇ ಕಾಪಿ ಮಾಡುವುದಕ್ಕೆ ಹೊರಟಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ 4 ವರ್ಷ ಬಳಿಕ ಕಾಂಗ್ರೆಸ್ ನಿಂದ ಅಭಿಯಾನ ಆರಂಭವಾಗಿತ್ತು. ಆದರೆ ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದ 3 ತಿಂಗಳಲ್ಲಿ ಬಿಜೆಪಿಯವರು ಈ ಅಭಿಯಾನ ಮಾಡ್ತಾರೆಂದರೇ ಅದಕ್ಕೆ ಅರ್ಥ ಇಲ್ಲ. ಬಿಜೆಪಿಯಲ್ಲಿದ್ದಾಗ ಎಲ್ಲ‌ ವಿಷಯಗಳನ್ನು ಕೋರ್ ಕಮಿಟಿಯಲ್ಲಿ ಹೇಳಿದ್ದೆ. ಹೊರಗಡೆ ಹೇಳೋಕೆ ಆಗದ ವಿಷಯ ಹೇಳಿದ್ದೆ, ಅವರು ತಿಳಿದುಕೊಳ್ಳಲಿಲ್ಲ ಎಂದು ಜಗದೀಶ್ ಶೆಟ್ಟರ್ ವಾಗ್ದಾಳಿ ನಡೆಸಿದರು.

Key words: Former CM- Jagdish Shettar – BJP ‘Paycs- campaign.