ರಮೇಶ್ ಜಾರಕಿಹೊಳಿ ಭೇಟಿ ಕುರಿತು ಸ್ಪಷ್ಟನೆ ಕೊಟ್ಟ ಮಾಜಿ ಸಿಎಂ ಜಗದೀಶ್ ಶೆಟ್ಟರ್.

ಬೆಂಗಳೂರು,ಅಕ್ಟೋಬರ್,17,2023(www.justkannada.in):  ಎಂಎಲ್ ಸಿ ಜಗದೀಶ್ ಶೆಟ್ಟರ್ ಅವರನ್ನು ಆರ್ ಟಿ ನಗರ ನಿವಾಸದಲ್ಲಿ ರಮೇಶ್ ಜಾರಕಿಹೊಳಿ ಭೇಟಿ ಮಾಡಿದ್ದಾರೆ ಎನ್ನಲಾಗಿತ್ತು. ಆದರೆ ಈ ಕುರಿತು ಸ್ವತಃ ಸ್ಪಷ್ಟನೆ  ನೀಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು, ರಮೇಶ್ ಜಾರಕಿಹೊಳಿ ನನ್ನನ್ನು ಭೇಟಿಯಾಗಿಲ್ಲ ಎಂದಿದ್ದಾರೆ.

ರಮೇಶ್ ಜಾರಕಿಹೊಳಿ ಭೇಟಿಯಾಗಿದ್ದಾರೆ ಎಂದು ಯಾರು ಹೇಳಿದ್ದು, ಈ ಹಿಂದೆ ಹಲವು ಬಾರಿ ಭೇಟಿಯಾಗಿದ್ದಾರೆ. ಆದರೆ, ಇವತ್ತು ಭೇಟಿಯಾಗಿಲ್ಲ. ರಮೇಶ್ ಜಾರಕಿಹೊಳಿ ಜೊತೆ ಯಾವತ್ತೂ ರಾಜಕೀಯ ಚರ್ಚೆ ಆಗಿಲ್ಲ ಎಂದರು.

ಪಂಚರಾಜ್ಯ ಚುನಾವಣೆಗೆ ಕಾಂಗ್ರೆಸ್ ಹಣ ಸಂಗ್ರಹಿಸುತ್ತಿದೆ ಎಂಬ ಬಿಜೆಪಿ ಆರೋಪ ಕುರಿತು ಪ್ರತಿಕ್ರಿಯಿಸಿದ ಜಗದೀಶ್ ಶೆಟ್ಟರ್, ಬಿಜೆಪಿಯಲ್ಲಿ ಇರೋದು ಸತ್ಯಹರಿಶ್ಚಂದ್ರರಾ? ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ಹತ್ತಾರು ಹಗರಣ ಕೇಳಿ ಬಂತು. ಇವರ ಹೇಳಿಕೆಯಿಂದ ಇಡೀ ರಾಜಕೀಯ ಅಸಹ್ಯ ಮೂಡುವಂತೆ ಆಗುತ್ತಿದೆ. ತಾವು ಸತ್ಯಹರಿಶ್ಚಂದ್ರರು ಎಂದು ಬಿಜೆಪಿಯವರು ಹೇಳಲಿ ನೋಡೋಣ. ಬಿಜೆಪಿಗೆ ಒಬ್ಬ ವಿರೋಧ ಪಕ್ಷದ ನಾಯಕನನ್ನೇ ಆಯ್ಕೆ ಮಾಡಲು ಆಗಿಲ್ಲ  ಎಂದು ಕಿಡಿಕಾರಿದರು.

Key words: Former CM -Jagdish Shettar -clarified -about -Ramesh Jarakiholi -visit.