Friday, August 7, 2026

BDA Apartments

Home Front Page ಬೆಳಗಾವಿಯಿಂದ ಸ್ಪರ್ಧೆ ಕುರಿತು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದು ಹೀಗೆ..

ಬೆಳಗಾವಿಯಿಂದ ಸ್ಪರ್ಧೆ ಕುರಿತು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದು ಹೀಗೆ..

ನವದೆಹಲಿ, ಫೆಬ್ರವರಿ,17,2024(www.justkannada.in):  ಮುಂಬರುವ ಲೋಕಸಭೆ ಚುನಾವಣೆಗೆ ಬೆಳಗಾವಿ ಟಿಕೆಟ್ ಗೆ ನನ್ನ ಹೆಸರು ಕೇಳಿ ಬರ್ತಿದೆ. ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ಮಾಜಿ ಸಿಎಂ, ಬಿಜೆಪಿ ನಾಯಕ ಜಗದೀಶ್ ಶೆಟ್ಟರ್ ತಿಳಿಸಿದರು.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಜಗದೀಶ್ ಶೆಟ್ಟರ್, ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ನನ್ನ ಹೆಸರು ಕೇಳಿ ಬರುತ್ತಿದೆ. ಯಾವ ಉದ್ದೇಶದಿಂದ ನನ್ನ ಹೆಸರು ಕೇಳಿ ಬರುತ್ತಿದೆ ಎಂಬುದು ಗೊತ್ತಿಲ್ಲ.ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿರ್ಧರಿಸಿಲ್ಲ.  ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿದ್ದೇನೆ ಎಂದರು.

ಜಗದೀಶ್ ಶೆಟ್ಟರ್ ಅವರು ಇತ್ತೀಚೆಗೆ ಮರಳಿ ಬಿಜೆಪಿ ಸೇರ್ಪಡೆಯಾದ ಬೆನ್ನಲ್ಲೇ, ಅವರು ಬೆಳಗಾವಿ ಕ್ಷೇತ್ರದಿಂದ ಲೋಕಸಭೆ  ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿತ್ತು. ನಂತರ ಆ ಬಗ್ಗೆ ಸಾಕಷ್ಟು ವದಂತಿಗಳೂ ಹಬ್ಬಿದ್ದವು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಇದೀಗ ಸ್ಪರ್ಧಿಸುವ ನಿರ್ಧಾರ ಮಾಡಿಲ್ಲ ಎಂದು ಶೆಟ್ಟರ್ ಸ್ಪಷ್ಟಪಡಿಸಿದ್ದಾರೆ.

Key words: Former CM- Jagdish Shettar –lokasabha election competition – Belgaum.