Tuesday, August 11, 2026

BDA Apartments

Home Front Page ಹೈಕಮಾಂಡ್ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ- ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹೈಕಮಾಂಡ್ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ- ಮಾಜಿ ಸಿಎಂ ಜಗದೀಶ್ ಶೆಟ್ಟರ್

ಬೆಂಗಳೂರು,ಮೇ,19,2023(www.justkannada.in): ನಾನು ಯಾವುದೇ ಸ್ಥಾನಮಾನದ ಆಕಾಂಕ್ಷಿ ಅಲ್ಲ. ಹೈಕಮಾಂಡ್ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ತಿಳಿಸಿದರು.

ಇಂದು ನಿಯೋಜಿತ ಸಿಎಂ ಸಿದ್ಧರಾಮಯ್ಯ ಅವರನ್ನ ಭೇಟಿಯಾಗಿ ಜಗದೀಶ್ ಶೆಟ್ಟರ್ ಅಭಿನಂದನೆ ಸಲ್ಲಿಸಿದರು.  ಬಳಿಕ ಮಾತನಾಡಿದ ಜಗದೀಶ್ ಶೆಟ್ಟರ್, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾದ ಹಿನ್ನಲೆಯಲ್ಲಿ ಅವರನ್ನು ಅಭಿನಂದನೆ ಸಲ್ಲಿಸಿಲು ಬಂದಿದ್ದೆ. ಬೇರೆ ಯಾವುದೇ ಚರ್ಚೆ ಮಾಡಿಲ್ಲ ಎಂದರು.

ನಾನು ಯಾವುದೇ ಸ್ಥಾನಮಾನದ ಆಕಾಂಕ್ಷಿಯಲ್ಲ. ಕಾಂಗ್ರೆಸ್ ಮತ್ತು ಹೈಕಮಾಂಡ್ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧ ಎಂದು ಜಗದೀಶ್ ಶೆಟ್ಟರ್ ಹೇಳಿದರು.

Key words: Former CM- Jagdish Shettar-meet-Siddaramaiah