ಉಪರಾಷ್ಟ್ರಪತಿ ಅಭ್ಯರ್ಥಿ ಸ್ಥಾನಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೆಸರು ಮುನ್ನೆಲೆಗೆ..?

ಬೆಂಗಳೂರು,ಜುಲೈ,16,2022(www.justkannada.in): ಉಪರಾಷ್ಟ್ರಪತಿ ಬಿಜೆಪಿ ಅಭ್ಯರ್ಥಿ ಸ್ಥಾನಕ್ಕೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೆಸರು ಮುನ್ನೆಲೆಗೆ ಬಂದಿದೆ ಎಂದು ಹೇಳಲಾಗುತ್ತಿದೆ.

ಉಪರಾಷ್ಟ್ರಪತಿ ಬಿಜೆಪಿ ಅಭ್ಯರ್ಥಿ ಸ್ಥಾನಕ್ಕೆ ಜಗದೀಶ್ ಶೆಟ್ಟರ್, ಮುಕ್ತಾರ್ ಅಬ್ಬಾಸ್ ನಖ್ವಿ,ಕೇರಳಾ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಹೆಸರು ಕೇಳಿ ಬಂದಿದ್ದು, ಅಭ್ಯರ್ಥಿ ಸ್ಥಾನಕ್ಕೆ ಶೆಟ್ಟರ್ ಹೆಸರು ಮುಂಚೂಣಿಯಲ್ಲಿದೆ ಎನ್ನಲಾಗುತ್ತಿದೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್ ರನ್ನು ಅಭ್ಯರ್ಥಿಯಾಗಿಸುವ  ಬಗ್ಗೆ ಬಿಜೆಪಿ ವಲಯದಲ್ಲಿ ಚರ್ಚೆಯಾಗುತ್ತಿದೆ.  ಸಂಜೆ 6 ಗಂಟೆಗೆ  ಸಂಸದೀಯ ಮಂಡಳಿ ಸಭೆ ನಡೆಯಲಿದ್ದು ಸಭೆ ಬಳಿಕ ಬಿಜೆಪಿ ಅಭ್ಯರ್ಥಿ ಘೋಷಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Key words: Former CM -Jagdish Shettar- name – Vice President -candidate.