Monday, August 10, 2026

BDA Apartments

Home Front Page ದೇಶದ ಕಾನೂನಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವವರನ್ನು ‘ಬಲಿ’ ಹಾಕಬೇಕು: ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್

ದೇಶದ ಕಾನೂನಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವವರನ್ನು ‘ಬಲಿ’ ಹಾಕಬೇಕು: ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್

ಬೆಂಗಳೂರು, ಏಪ್ರಿಲ್ 20, 2020 (www.justkannada.in): ದೇಶದ ಕಾನೂನಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವವರನ್ನು ಮುಲಾಜಿಲ್ಲದೆ ‘ಬಲಿ’ ಹಾಕಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ನಿನ್ನೆ ರಾತ್ರಿ ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದ ಪೊಲೀಸರು, ವೈದ್ಯರು ಮತ್ತು ಆಶಾ ಕಾರ್ಯಕರ್ತೆಯರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಎಚ್ ಡಿ ಕುಮಾರಸ್ವಾಮಿ ಅವರು, ‘ಬೆಂಗಳೂರಿನ ಪಾದರಾಯನಪುರದಲ್ಲಿ ಕೊರೋನಾ ಸೋಂಕಿತರ ಸಂಪರ್ಕದಲ್ಲಿದ್ದವರನ್ನು ಕ್ವಾರಂಟೈನ್ ಗೆ ಕಳುಹಿಸಲು ಮುಂದಾಗಿದ್ದ ಪೊಲೀಸರು, ವೈದ್ಯಕೀಯ, ಬಿಬಿಎಂಪಿ ಸಿಬ್ಬಂದಿಗಳ ಮೇಲೆ ಉದ್ರಿಕ್ತ ಗುಂಪು ಹಲ್ಲೆ ನಡೆಸಿರುವುದು ಖಂಡನೀಯ. ಮುಲಾಜಿಲ್ಲದೆ ಅಂಥವರ ವಿರುದ್ಧ ಕಠಿಣ ಕಾನೂನು ಅಸ್ತ್ರ ಪ್ರಯೋಗಿಸಬೇಕು ಎಂದು ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಎಚ್ಡಿಕೆ, ಅಂತೆಯೇ ‘ದೇಶದ ಕಾನೂನಿಗೆ ವ್ಯತಿರಿಕ್ತವಾಗಿ ನಡೆದುಕೊಳ್ಳುವವರನ್ನು ಮುಲಾಜಿಲ್ಲದೆ ‘ಬಲಿ’ ಹಾಕಬೇಕು. ಇಡೀ ಜಗತ್ತು ಎದುರಿಸುತ್ತಿರುವ ಕರೋನಾ ವೈರಸ್ ವಿರುದ್ಧ ಜನತೆ ಸಂಘರ್ಷ ಮಾಡುತ್ತಿದ್ದಾರೆ. ಇಂತಹ ವಿಷಮ ಪರಿಸ್ಥಿತಿಯಲ್ಲಿ ಧರ್ಮದ ಗುರಾಣಿಯನ್ನು ಅಡ್ಡ ತಂದು ವ್ಯವಸ್ಥೆ ಬುಡಮೇಲು ಮಾಡುವುದನ್ನು ಅತ್ಯುಗ್ರವಾಗಿ ಖಂಡಿಸುತ್ತೇನೆ. ಪೊಲೀಸರು, ವೈದ್ಯಕೀಯ ಸಿಬ್ಬಂದಿ ಸೇರಿದಂತೆ ಆಡಳಿತ ವ್ಯವಸ್ಥೆಯ ನೈತಿಕ ಬಲ ಕುಗ್ಗಿಸುವ ಮತ್ತು ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡಿ ದಂಗೆ ಏಳುವವರರ ಹೆಡೆಮುರಿ ಕಟ್ಟಬೇಕು ಎಂದು ಆಗ್ರಹಿಸಿದ್ದಾರೆ.