Wednesday, October 7, 2026

BDA Apartments

ನಟಿ ‘ಕೃಷಿ ತಾಪಂಡ’ ಮನೆಯಲ್ಲಿ ಸ್ನೇಹಿತ ಆತ್ಮಹತ್ಯೆಗೆ ಶರಣು BDA JK_Adv BDA Adv
Home Front Page 8 ತಿಂಗಳ ಬಂಧನದ ಬಳಿಕ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಬಿಡುಗಡೆ

8 ತಿಂಗಳ ಬಂಧನದ ಬಳಿಕ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಬಿಡುಗಡೆ

ಶ್ರೀನಗರ, ಮಾರ್ಚ್ 24, 2020 (www.justkannada.in): ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ಧತಿ ನಿರ್ಧಾರ ವಿರೋಧಿಸಿ ಗೃಹ ಬಂಧನಕ್ಕೆ ಗುರಿಯಾಗಿದ್ದ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಇಂದು ಬಿಡುಗಡೆಯಾಗಿದ್ದಾರೆ.

ಜಮ್ಮುಕಾಶ್ಮೀರದ ಸ್ಥಿತಿ ಸಂಪೂರ್ಣ ಹತೋಟಿಯಲ್ಲಿದ್ದು, ಮುಂಜಾಗ್ರತಾ ಕ್ರಮವಾಗಿ ಗೃಹ ಬಂಧನದಲ್ಲಿ ಇರಿಸಲಾಗಿದ್ದ ಎಲ್ಲಾ ರಾಜಕೀಯ ನಾಯಕರನ್ನು ಹಂತ ಹಂತವಾಗಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಈಗಾಗಲೇ ಹಿರಿಯ ರಾಜಕಾರಣಿ ಫಾರೂಕ್ ಅಬ್ದುಲ್ಲಾ ಗೃಹ ಬಂಧನದಿಂದ ಬಿಡುಗಡೆ ಹೊಂದಿದ್ದು, ಇಂದು ಅವರ ಪುತ್ರ ಒಮರ್ ಅಬ್ದುಲ್ಲಾ ಅವರಿಗೆ ಗೃಹ ಬಂಧನದಿಂದ ಬಿಡುಗಡೆ ಮಾಡಲಾಗಿದೆ.