ಬೆಂಗಳೂರು,ಸೆಪ್ಟಂಬರ್,2,2026 (www.justkannada.in): ನಮ್ಮ ನಾಯಕ ರಾಹುಲ್ ಗಾಂಧಿ ಅವರ ವಿರುದ್ದ ಅನಗತ್ಯ ಎಫ್ ಐಆರ್ ಹಾಕಿದ್ದಾರೆ. ಇದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ದ ಎಫ್ ಐಆರ್ ಖಂಡಿಸಿ ಫ್ರೀಡಂಪಾರ್ಕ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ನೇತೃತ್ವದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.
ಈ ಧರಣಿಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ ಮೇಲೆ ಅನಗತ್ಯ ಎಫ್ ಐಆರ್ ಹಾಕಿದ್ದಾರೆ . ಬಿಜೆಪಿಯವರು ಸಂವಿಧಾನ ವಿರೋಧಿ ಕೆಲಸ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ತಪ್ಪು ಮಾಡದಿದ್ದರೂ ಎಫ್ ಐಆರ್ ಹಾಕಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಮಾಡಿದ್ದಾರೆ. ರಾಹುಲ್ ಗಾಂಧಿ ಮುಗಿಸಬೇಕೆಂದು ಎಫ್ ಐಆರ್ ಹಾಕಿದ್ದಾರೆ ಇದು ಸಂವಿಧಾನಕ್ಕೆ ಮಾಡಿದ ಅಪಚಾರ ಎಂದು ವಾಗ್ದಾಳಿ ನಡೆಸಿದರು.
Key words: FIR, against, Rahul Gandhi, Former CM, Siddaramaiah







