Saturday, November 14, 2026

Dasara Wishes

Happy Dasara
Home Front Page ಜೆಡಿಎಸ್-ಬಿಜೆಪಿ ಗೂಂಡಾವರ್ತನೆ; ಸಿದ್ದು ಎದುರು ಕಣ್ಣೀರಿಟ್ಟ ಪ್ರದೀಪ್

ಜೆಡಿಎಸ್-ಬಿಜೆಪಿ ಗೂಂಡಾವರ್ತನೆ; ಸಿದ್ದು ಎದುರು ಕಣ್ಣೀರಿಟ್ಟ ಪ್ರದೀಪ್

ಬೆಂಗಳೂರು,ಜೂನ್,30,2026 (www.justkannada.in): ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕೆಂಪೇಗೌಡ ಜಯಂತಿ ವೇಳೆ ನಡೆದ ಘಟನೆಯನ್ನು ವಿವರಿಸಿದರು.

ಜೆಡಿಎಸ್, ಬಿಜೆಪಿ ಕಾರ್ಯಕರ್ತರು ಚಪ್ಪಲಿ ಎಸೆದಿದ್ದಲ್ಲದೆ ತಮ್ಮ ಹಾಗೂ ತಮ್ಮ ಕುಟುಂಬವನ್ನು ನಿಂದಿಸಿದ್ದನ್ನು ವಿವರಿಸಿ ಪ್ರದೀಪ್ ಈಶ್ವರ್ ಅವರು ಕಣ್ಣೀರು ಹಾಕಿದರು.

ಪ್ರದೀಪ್ ಅವರಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ ಅವರು, ರಾಜಕಾರಣದಲ್ಲಿ ಇಂಥಹ ಘಟನೆಗಳು ಸಾಮಾನ್ಯ. ಇಂಥವನ್ನು ಎದುರಿಸಬೇಕು. ಇದರಿಂದ ಧೃತಿಗೆಡಬೇಡಿ. ನಿಮ್ಮೊಂದಿಗೆ ನಾವಿದ್ದೇವೆ ಎಂದರು.

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ತಿಳಿಸಿದರು.ಜೆಡಿಎಸ್-ಬಿಜೆಪಿ ಗೂಂಡಾವರ್ತನೆ; ಸಿದ್ದು ಎದುರು ಕಣ್ಣೀರಿಟ್ಟ ಪ್ರದೀಪ್ BDA JK_Adv BD...

ಪೋಲೀಸರ ಸಮ್ಮುಖದಲ್ಲೇ ಅದರಲ್ಲೂ ಆಡಳಿತ ಪಕ್ಷದ ಶಾಸಕರಿಗೆ ಈ ರೀತಿ ಆಗಿರುವುದರ ಬಗ್ಗೆ ಸಿದ್ದರಾಮಯ್ಯ ಅವರು ಬೇಸರ ವ್ಯಕ್ತಪಡಿಸಿದರು.  ಸಂಬಂಧಪಟ್ಟ ಅಧಿಕಾರಿಯ ವಿರುದ್ಧ ಕ್ರಮ ಜರಗಿಸಬೇಕು ಎಂದರು.

ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ, ಮಾಜಿ ಸಚಿವ ಮಧು ಬಂಗಾರಪ್ಪ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.ಜೆಡಿಎಸ್ jk02_new jk02 new

Key words: JDS-BJP, Pradeep Eshwar, tears, Former CM, Siddaramaiah