Saturday, September 5, 2026

BDA Apartments

Home Front Page ಪ್ರತಿಭಟನೆಯನ್ನ ಹತ್ತಿಕ್ಕುವ ಕೆಲಸ ಸರ್ವಾಧಿಕಾರಿ ಧೋರಣೆ- ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ

ಪ್ರತಿಭಟನೆಯನ್ನ ಹತ್ತಿಕ್ಕುವ ಕೆಲಸ ಸರ್ವಾಧಿಕಾರಿ ಧೋರಣೆ- ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ

ನವದೆಹಲಿ,ಜುಲೈ,22,2026 (www.justkannada.in):  ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ಸಿಜೆಪಿ ವತಿಯಿಂದ ನಡೆದ ಪ್ರತಿಭಟನೆ ವೇಳೆ ಪೊಲೀಸರು ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ದ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಕುರಿತು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಪ್ರಜಾಪ್ರಭುದತ್ವದಲ್ಲಿ ಪ್ರತಿಭಟನೆ ಮಾಡುವುದು ಜನರ ಹಕ್ಕು.  ರಾಹುಲ್ ಗಾಂಧಿ ಸಹ ಅದೇ ರೀತಿ ಪ್ರತಿಭಟನೆ ಮಾಡುತ್ತಿದ್ದಾರೆ. ಪ್ರತಿಭಟನೆ ಮಾಡುವವರನ್ನ ಹತ್ತಿಕ್ಕಿರುವುದನ್ನ ಖಂಡಿಸುತ್ತೇನೆ.  ಪ್ರತಿಭಟನೆಯನ್ನು ಹತ್ತಿಕುವ ಕೆಲಸ ಸರ್ವಾಧಿಕಾರಿ ಧೋರಣೆ ಎಂದರು.

ಇನ್ನು ಸಚಿವ ಸಂಪುಟ ವಿಸ್ತರಣೆ ಸಂಬಂಧ ಯಾವುದೇ ಚರ್ಚೆ ಆಗಿಲ್ಲ. ಮಲ್ಲಿಕಾರ್ಜುನ ಖರ್ಗೆ ಹುಟ್ಟುಹಬ್ಬ ಇದ್ದ ಕಾರಣ ಶುಭಾಶಯ ತಿಳಿಸಲು ಹೋಗಿದ್ದೆ ಎಂದು ಸಿದ್ದರಾಮಯ್ಯ ತಿಳಿಸಿದರು.

Key words:   protests, dictatorial, former CM, Siddaramaiah