ಕೊನೆಗೂ ಕ್ಷೇತ್ರದ ಗುಟ್ಟು ಬಿಟ್ಟುಕೊಡದ ಸಿದ್ಧರಾಮಯ್ಯ: ಆಪ್ತಸಹಾಯಕರ ಮೂಲಕ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ.

ಬೆಂಗಳೂರು,ನವೆಂಬರ್,21,2022(www.justkannada.in):  ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಗಾಗಿ ಆಕಾಂಕ್ಷಿಗಳು ಕೆಪಿಸಿಸಿಗೆ ಅರ್ಜಿ ಸಲ್ಲಿಸಲು  ಇಂದು ಕೊನೆಯ ದಿನವಾಗಿತ್ತು. ಈ ಮಧ್ಯೆ ವಿಪಕ್ಷ ನಾಯಕ ಸಿದ‍್ಧರಾಮಯ್ಯ ತಮ್ಮ ಆಪ್ತ ಸಹಾಯಕರ ಮೂಲಕ ಟಿಕೆಟ್ ಗಾಗಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಸಿದ್ಧರಾಮಯ್ಯ ಪರವಾಗಿ ಆಪ್ತಸಹಾಯಕರಾದ ಪ್ರಭಾಕರ್ ಮತ್ತು  ವೆಂಕಟೇಶ್ ಅವರು ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ಎಲ್ ನಾರಾಯಣ್ ಗೆ ಅರ್ಜಿ ಸಲ್ಲಿಕೆ ಮಾಡಿದರು. ಆದರೆ ಸಿದ್ಧರಾಮಯ್ಯ ತಾವು ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದರ ಬಗ್ಗೆ ಮಾಹಿತಿ ನೀಡಿಲ್ಲ.

ಸಲ್ಲಿಸಿರುವ ಅರ್ಜಿಯಲ್ಲಿ ಕ್ಷೇತ್ರದ ಹೆಸರು ಉಲ್ಲೇಖಿಸದೇ,   ಹೈಕಮಾಂಡ್ ಸೂಚನೆ ಮೇರೆಗೆ ಕ್ಷೇತ್ರ ಆಯ್ಕೆ ಎಂದು ಉಲ್ಲೇಖ ಮಾಡಿದ್ದಾರೆ.   ಇನ್ನು ಸಿದ್ಧರಾಮಯ್ಯ ಅವರು ಕೋಲಾರ, ವರುಣಾ ಅಥವಾ ಬಾದಮಿಯಲ್ಲಿ ಸ್ಪರ್ಧಿಸುವ ಸಾಧ್ಯತೆ ಇದೆ ಎಂಬ ಚರ್ಚೆಯಾಗುತ್ತಿದೆ.

Key words: Former CM-Siddaramaiah -Application –congress- ticket