ಮಾಜಿ ಸಿಎಂ ಸಿದ್ಧರಾಮಯ್ಯ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್..

ಬೆಂಗಳೂರು,ಆ,13,2020(www.justkannada.in): ಕೊರೋನಾ ಸೋಂಕಿಗೆ ತುತ್ತಾಗಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ  ಕೊರೋನಾದಿಂದ ಗುಣಮುಖರಾಗಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ.jk-logo-justkannada-logo

ಯಾವುದೇ ರೋಗ ಲಕ್ಷಣ ಇಲ್ಲದೇ ಇದ್ದರೂ ವರದಿಯಲ್ಲಿ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಸಿದ್ದರಾಮಯ್ಯ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸಿದ್ದರಾಮಯ್ಯ ಅವರಿಗೆ ಬುಧವಾರ ನಡೆದ ಪರೀಕ್ಷೆಯಲ್ಲಿ ಕೊರೊನಾ ನೆಗೆಟಿವ್ ವರದಿ ಬಂದಿದ್ದು ಈ ಹಿನ್ನೆಲೆ ಇಂದು ಸಿದ್ಧರಾಮಯ್ಯ  ಡಿಸ್ಜಾರ್ಜ್ ಆಗಲಿದ್ದಾರೆ.Former CM -Siddaramaiah -discharge-hospital- today

ಇದೇ ವೇಳೆ ನಿನ್ನೆ ಹುಟ್ಟುಹಬ್ಬಕ್ಕೆ ಶುಭ ಕೋರಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದ ಸಿದ್ದರಾಮಯ್ಯ, ನಾಡಿನ ಸೇವೆ ಮಾಡುವ ಮೂಲಕ ನಿಮ್ಮ ಋಣ ತೀರಿಸುವೆ ಎಂದಿದ್ದರು.

 

Keywords: Former CM -Siddaramaiah -discharge-hospital- today