ಜೇಮ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂಗೆ ಪತ್ರ ಬರೆಯುವೆ- ಮಾಜಿ ಸಿಎಂ ಸಿದ್ಧರಾಮಯ್ಯ.

ಬೆಂಗಳೂರು,ಮಾರ್ಚ್,17,2022(www.justkannada.in):  ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹುಟ್ಟಹಬ್ಬ ದಿನವಾದ ಇಂದು  ಅವರ ಕೊನೆಯ  ಸಿನಿಮಾ ಜೇಮ್ಸ್  ಬಿಡುಗಡೆಯಾಗಿದ್ದು  ಚಿತ್ರಕ್ಕೆ ಎಲ್ಲೆಡೆ ಭರ್ಜರಿ ಸ್ವಾಗತ ಸಿಕ್ಕಿದೆ. ಈ ಮಧ್ಯೆ   ಜೇಮ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ಸಂಬಂಧ ವಿಪಕ್ಷ ನಾಯಕ ಸಿದ್ದರಾಮಯ್ಯ  ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಅವರು, ಪುನೀತ್ ರಾಜ್ ಕುಮಾರ್ ನಟನೆಯ ಕೊನೆಯ ಚಿತ್ರ ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸುತ್ತೇನೆ.  ಈ ಕುರಿತು  ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆಯುತ್ತೇನೆ ಎಂದರು.

ಇನ್ನು ನಟ ದಿ. ಪುನೀತ್ ರಾಜ್ ಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ಕೊಡಬೇಕು  ಸಿದ್ಧರಾಮಯ್ಯ ಆಗ್ರಹಿಸಿದರು. ನಟ ಪವರ್ ಸ್ಟಾರ್ ಗೆ ಈಗಾಗಲೇ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಲಾಗಿದ್ದು, ಪ್ರದಾನ ಮಾಡುವ ದಿನಾಂಕ ಶೀಘ್ರದಲ್ಲೇ ತಿಳಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

Key words: Former CM –Siddaramaiah-James -Cinema