ಸಿದ್ಧರಾಮಯ್ಯ ಸಿಎಂ ಆಗಿದ್ದಾಗ ಹಿಂದುಳಿದ ವರ್ಗಕ್ಕೆ ಏನೂ ಮಾಡಿಲ್ಲ- ನಳೀನ್ ಕುಮಾರ್ ಕಟೀಲ್ 

ಉಡುಪಿ,ಜುಲೈ,25,2021(www.justkannada.in):  ಅಹಿಂದ ಹೋರಾಟ ಮಾಡಿ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದರು. ಆದರೆ  ಸಿಎಂ ಆದ ಮೇಲೆ ಅಹಿಂದ ಮರೆತರು. ಅವರು ಸಿಎಂ ಆಗಿದ್ದಾಗ ಹಿಂದುಳಿದ ವರ್ಗಕ್ಕೆ ಏನೂ ಮಾಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.jk

ಉಡುಪಿಯಲ್ಲಿ ಇಂದು ಮಾತನಾಡಿದ ನಳೀನ್ ಕುಮಾರ್ ಕಟೀಲ್ , ಸಿದ್ಧರಾಮಯ್ಯ ದಲಿತ ಮುಖ್ಯಮಂತ್ರಿ ಚರ್ಚೆಯನ್ನೇ ಮುಚ್ಚಿಹಾಕಿದರು. ಡಾ.ಜಿ.ಪರಮೇಶ್ವರ್‌ರನ್ನು ಮೂಲೆಗುಂಪು ಮಾಡಿದ್ದರು. ಹೀಗಿರುವಾಗ ಸಿದ್ದರಾಮಯ್ಯ ಅವರು ತಾಕತ್ ಇದ್ದರೆ ದಲಿತರನ್ನು ಸಿಎಂ ಮಾಡಿ ಎನ್ನುವುದು ಎಷ್ಟು ಸರಿ? ಎಂದು ಕಿಡಿಕಾರಿದರು.

 ವಾಜಪೇಯಿ ಸರ್ಕಾರ ಮುಸ್ಲಿಂ ಬಂಧುವನ್ನು ರಾಷ್ಟ್ರಪತಿ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ದಲಿತ ರಾಷ್ಟ್ರಪತಿಯನ್ನು ದೇಶಕ್ಕೆ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ ಗೋವಿಂದ ಕಾರಜೋಳರನ್ನು ಡಿಸಿಎಂ ಮಾಡಿದ್ದಾರೆ. ಕೇಂದ್ರದಲ್ಲಿ ನಾರಾಯಣಸ್ವಾಮಿ ಸಚಿವರಾಗಿದ್ದಾರೆ. ಕಾಂಗ್ರೆಸ್ ದಲಿತರಿಗಾಗಿ ಏನು ಮಾಡಿದೆ ಹೇಳಿ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಅವರಿಗೆ ನಳಿನ್‌ ಕುಮಾರ್ ಕಟೀಲ್ ತಿರುಗೇಟು ಕೊಟ್ಟರು.

Key words: former CM-Siddaramaiah -nothing – backward class-bjp-state-president- Naleen Kumar Kateel