ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ನಾಮಪತ್ರ ಸಲ್ಲಿಕೆ.

ಮೈಸೂರು,ಏಪ್ರಿಲ್,19,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಇಂದು ಘಟಾನುಘಟಿ ನಾಯಕರು ನಾಮಪತ್ರ ಸಲ್ಲಿಕೆ ಮಾಡುತ್ತಿದ್ದು ವಿಪಕ್ಷ ನಾಯಕ ಸಿದ್ಧರಾಮಯ್ಯ ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು.

ನಂಜನಗೂಡು ತಾಲ್ಲೂಕು ಪಂಚಾಯಿತಿಗೆ ಆಗಮಿಸಿ ಮಾಜಿ ಸಿಎಂ ಸಿದ್ಧರಾಮಯ್ಯ ನಾಮಪತ್ರ ಸಲ್ಲಿಕೆ ಮಾಡಿದರು ಸಿದ್ಧರಾಮಯ್ಯಗೆ ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ಸಾಥ್ ನೀಡಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ವರುಣಾ ಕ್ಷೇತ್ರದಲ್ಲಿ ಈ ಬಾರಿ ಗೆದ್ದೇ ಗೆಲ್ಲುವೆ. ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ವಿ. ಸೋಮಣ್ಣಸ್ಪರ್ಧಿಸಿದ್ದಾರೆ.  ಸೋಮಣ್ಣವಸತಿ ಸಚಿವಾರಗದಿದ್ರೂ ಒಂದು ಮನೆ ಕಟ್ಟಿಸಿಕೊಡಲಿಲ್ಲ.  ಬಹಳ ಜನರು ಬಿಜೆಪಿ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಗಾಳಿ ಬೀಸುತ್ತಿದೆ. ಈ ಬಾರಿ 1 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಬೇಕು.  2ದಿನ ಮಾತ್ರ ಪ್ರಚಾರಕ್ಕೆ ಬರುತ್ತೇನೆ. ಮೈಸೂರು ಚಾಮರಾಜನಗರದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಿಸಿ ಎಂದು ಕರೆ ನೀಡಿದರು.

Key words: Former CM -Siddaramaiah -submits -nomination – Varuna Constituency.