ಮಾನ ಮರ್ಯಾದೆ ಇದ್ರೇ.. ಈತನನ್ನು ಕಿತ್ತುಹಾಕಬೇಕು- ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ಧರಾಮಯ್ಯ ಆಕ್ರೋಶ.

ಬೆಂಗಳೂರು,ಮೇ,23,2022(www.justkannada.in): ಶಾಲಾ ಪಠ್ಯಪುಸ್ತಕ  ಪರಿಷ್ಕರಣಾ ಸಮಿತಿಗೆ ರೋಹಿತ್ಯ ಚಕ್ರತೀರ್ಥ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ನಾಡಗೀತೆಯನ್ನು ಅವಹೇಳನ‌ ಮಾಡಿದ, ರಾಷ್ಟ್ರಕವಿಯನ್ನು ಗೇಲಿ ಮಾಡಿದ ಇಂತಹ ಒಬ್ಬ ಕಿಡಿಗೇಡಿಯನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಅಧ್ಯಕ್ಷರನ್ನಾಗಿ ಮಾಡಿದ ಬಿಜೆಪಿ ಸರ್ಕಾರಕ್ಕೆ ಮಾನ-ಮರ್ಯಾದೆ ಏನಾದರೂ ಇದ್ದರೆ ಮೊದಲು ಈತನನ್ನು ಕಿತ್ತುಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಾಥಮಿಕ, ಪ್ರೌಢ ಶಾಲೆಗಳ ಪಠ್ಯಪುಸ್ತಕ ಪರಿಷ್ಕರಣೆ ವಿವಾದಕ್ಕೆ ಕಾರಣವಾಗಿದ್ದು, ಶಿಕ್ಷಣ ತಜ್ಞ ಅಲ್ಲದ , ಪಠ್ಯಪುಸ್ತಕರ ರಚನೆಯ ಗಂಧ ಗಾಳಿಗೊತ್ತಿಲ್ಲದಂತ ರೋಹಿತ್ ಚಕ್ರತೀರ್ಥ ಅವರನ್ನು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷರನ್ನಾಗಿ ಮಾಡಿದ್ದಾರೆ ಎಂದು ಸಿದ್ಧರಾಮಯ್ಯ  ಇತ್ತೀಚೆಗೆ ಆಕ್ರೋಶ ಹೊರ ಹಾಕಿದ್ದರು.

Key words: Former CM-Siddaramaiah-tweet-outrage-against-govt.