ಸಚಿವ ಪುಟ್ಟರಂಗಶೆಟ್ಟಿಗೆ ತರಾಟೆ ತೆಗೆದುಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ…

ಮೈಸೂರು,ಮೇ,28,2019(www.justkannada.in):  ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಧೃವನಾರಾಯಣ್ ಸೋಲು ಹಿನ್ನೆಲೆ ಅಲ್ಲಿನ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿಗೆ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ತರಾಟೆ ತೆಗೆದುಕೊಂಡಿದ್ದಾರೆ.

ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯರನ್ನ ಭೇಟಿ ಮಾಡಲು ಆಗಮಿಸಿದ್ದರು. ಈ ವೇಳೆ  ಧೃವನಾರಾಯಣ್ ಸೋಲಿನ ವಿಚಾರಕ್ಕೆ ಸಂಬಂಧಿಸಿದಂತೆ ಕ್ಲಾಸ್ ತೆಗೆದುಕೊಂಡ ಮಾಜಿ ಸಿಎಂ ಸಿದ್ದರಾಮಯ್ಯ ಏನಯ್ಯ ನಿಮ್ಮ ಭಾಗದಲ್ಲಿ ಲೀಡ್ ಕಡಿಮೆ ಬಂದಿದೆಯಂತಲ್ಲಾ..? ನೀನು ಲೀಡರಾ…? ಹಿಂಗೆ ಮಾಡಿದ್ರೆ ಹೆಂಗಯ್ಯ..? ಎಂದು ತರಾಟೆ ತೆಗೆದುಕೊಂಡರು.

ಸಿದ್ದರಾಮಯ್ಯ ಕ್ಲಾಸ್ ತೆಗೆದುಕೊಳ್ಳುತ್ತಿದ್ದಂತೆ ಸಚಿವ ಪುಟ್ಟರಂಗಶೆಟ್ಟಿ ಅಲ್ಲಿಂದ ಕಾಲ್ಕಿತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

Key words: Former CM Siddaramaiah, who took classes for minister Putturangashetty

#Politicalnews #siddaramaiah #puttarangashetty