ವರುಣಾ ಕ್ಷೇತ್ರದಿಂದಲೇ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ ಮಾಜಿ ಸಿಎಂ ಸಿದ‍್ಧರಾಮಯ್ಯ: ಮತ್ತೊಂದು ಕ್ಷೇತ್ರದ ಮೇಲೂ ಕಣ್ಣು..?

ಚಿತ್ರದುರ್ಗ,ಮಾರ್ಚ್,24,2023(www.justkannada.in): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊನೆಗೂ ವರುಣಾದಿಂದಲೇ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮತ್ತೊಂದು ಕ್ಷೇತ್ರದಲ್ಲೂ ನಿಲ್ಲುವ ಕುರಿತು ಮಾತನಾಡಿದ್ದಾರೆ.

ಇಂದು ಚಿತ್ರದುರ್ಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ  ಸಿದ್ದರಾಮಯ್ಯ, ನಮ್ಮ ಮನೆಯಲ್ಲಿ ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಹೇಳಿದ್ದಾರೆ. ವರುಣಾ ಜೊತೆಗೆ ಇನ್ನೊಂದು ಕ್ಷೇತ್ರದಲ್ಲಿ ಸ್ಪರ್ಧಿಸುವಂತೆ ಹೇಳುತ್ತಿದ್ದಾರೆ. ಹಾಗಾಗಿ ವರುಣಾ ಕ್ಷೇತ್ರದ ಟಿಕೆಟ್ ನೀಡುವಂತೆ ಕೇಳಿದ್ದೇನೆ ಎಂದು ತಿಳಿಸಿದರು.

ನನ್ನ ಸ್ಪರ್ಧೆ ಬಗ್ಗೆ ಎಲ್ಲಾ ನಿರ್ಧಾರವನ್ನ ಹೈಕಮಾಂಡ್ ಗೆ ಬಿಟ್ಟಿದ್ದೇನೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ. ಕೋಲಾರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದ ಸಿದ‍್ಧರಾಮಯ್ಯ ನಂತರ ಇತ್ತೀಚೆಗೆ ಕೋಲಾರದಿಂದ ಸ್ಪರ್ಧಿಸದಂತೆ ಸಲಹೆ ಬಂದ ಹಿನ್ನೆಲೆ ಇದೀಗ ವರುಣಾ ಕ್ಷೇತ್ರದಿಂದಲೇ ಸ್ಪರ್ಧೆಗೆ ಇಂಗಿತ ವ್ಯಕ್ತಪಡಿಸಿದ್ದಾರೆ.

Key words: Former CM- Siddramaiah – contest – Varuna- constituency.