ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ಆರೋಗ್ಯ ವಿಚಾರಿಸಿದ ಮಾಜಿ ಸಿಎಂ ಎಸ್.ಎಂ ಕೃಷ್ಣ.

ರಾಮನಗರ,ಡಿಸೆಂಬರ್,3,2022(www.justkannada.in):  ಮಾಜಿ ಸಿಎಂ ಆಗಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ‌ಅವರಿಗೆ ಅನಾರೋಗ್ಯ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿದರು.

ಹಾಗೆಯೇ ಕಾಂಗ್ರೆಸ್ ಕಾರ್ಯಕರ್ತರು ರಾಮನಗರದ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ  101 ಈಡುಗಾಯಿ ಹೊಡೆದು ಸಿದ್ದರಾಮಯ್ಯ ಬೇಗ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು.

ನಿನ್ನೆ ಅನಾರೋಗ್ಯಕ್ಕೀಡಾಗಿದ್ದ ಮಾಜಿ ಸಿಎಂ ಸಿದ್ಧರಾಮಯ್ಯ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿಕೊಂಡು ಬಳಿಕ ಮನೆಗೆ ಹಿಂದಿರುಗಿದ್ದರು.

Key words: Former CM -SM Krishna – opposition leader- Siddaramaiah- health.