ಐಟಿ ವಿಚಾರಣೆಗೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹಾಜರು….

ಬೆಂಗಳೂರು,ಅ,15,2019(www.justkannada.in): ಇಂದು ವಿಚಾರಣೆಗೆ ಹಾಜರಾಗುವಂತೆ ಐಟಿ ಅಧಿಕಾರಿಗಳು ನೋಟೀಸ್ ನೀಡಿದ ಹಿನ್ನೆಲೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಐಟಿ ವಿಚಾರಣೆಗೆ ಹಾಜರಾಗಿದ್ದಾರೆ.

ಅಕ್ಟೋಬರ್ 10 ರಂದು ತುಮಕೂರಿನಲ್ಲಿನ ಮಾಜಿ ಡಿಸಿಎಂ ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಯ ಮೇಲೆ ಹಾಗೂ ಬೆಂಗಳೂರಿನ ಸದಾಶಿವ ನಗರದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಮೂರು ದಿನಗಳ ಕಾಲ ದಾಖಲೆ ಪರಿಶೀಲನೆ ನಡೆಸಿದ್ದರು.

ಈ ನಡುವೆ ಪರಿಶೀಲನೆ ಬಳಿಕ ಅಕ್ಟೋಬರ್ 5 ರಂದು ವಿಚಾರಣೆಗೆ ಹಾಜರಾಗುವಂತೆ ಪರಮೇಶ್ವರ್ ಗೆ ಐಟಿ ಅಧಿಕಾರಿಗಳು ನೋಟೀಸ್ ನೀಡಿದ್ದರು. ಈ ಹಿನ್ನೆಲೆ ಇಂದು ವಿಚಾರಣೆಗೆ ಹಾಜರಾಗಲು ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಐಟಿ ಕಚೇರಿಗೆ ಪರಮೇಶ್ವರ್ ಆಗಮಿಸಿದ್ದಾರೆ.  ಡಾ.ಜಿ.ಪರಮೇಶ್ವರ್ ಅಣ್ಣನ ಮಗ ಆನಂದ್ ಸಹ ವಿಚಾರಣೆಗೆ ಹಾಜರಾಗಿದ್ದಾರೆ.

Key words: Former DCM -Dr G Parameshwar- attends- IT -hearing