ಭಜರಂಗದಳ ನಿಷೇಧ ಉಲ್ಲೇಖ: ಕಾಂಗ್ರೆಸ್ ಪ್ರಣಾಳಿಕೆ ಪ್ರತಿ ಸುಟ್ಟು ಹಾಕಿದ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ.

ಕಲ್ಬುರ್ಗಿ,ಮೇ,4,2023(www.justkannada.in):  ಭಜರಂಗದಳ ಸಂಘಟನೆಯನ್ನ ನಿಷೇಧ ಮಾಡುವುದಾಗಿ ಪ್ರಣಾಳಿಕೆಯಲ್ಲಿ ಉಲ್ಲೇಖಿಸಿರುವ ಹಿನ್ನೆಲೆ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ  ಕಾಂಗ್ರೆಸ್ ಪ್ರಣಾಳಿಕೆಯ ಪ್ರತಿಯನ್ನ ಸುಟ್ಟು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಲ್ಬುರ್ಗಿಯಲ್ಲಿ ಸುದ್ದಿಗೋಷ್ಠಿ ವೇಳೆ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಕಾಂಗ್ರೆಸ್ ಪ್ರಣಾಳಿಕೆ ಪ್ರತಿಯನ್ನ ಸುಟ್ಟು ಹಾಕಿದ್ದಾರೆ. ಬಳಿಕ ಮಾತನಾಡಿದ ಅವರು, ದೇಶಕ್ಕೆ ಸ್ವಾತಂತ್ರ್ಯ ಬಂದಿದ್ದು ಯಾಕೆ ಅಂತಾ ಕಾಂಗ್ರೆಸ್ ಮರೆತಿದೆ. ಒಕ್ಕಲಿಗ ಸಮುದಾಯ ನನ್ನ ಬೆನ್ನಿಗೆ ನಿಲ್ಲಿ ಎಂದು ಡಿಕೆ ಶಿವಕುಮಾರ್ ಹೇಳ್ತಾರೆ ಹಿಂದುಳಿದ ವರ್ಗ ನನ್ನ ಜತೆ ಇದ್ದಾರೆಂದು ಸಿದ್ಧರಾಮಯ್ಯ ಹೇಳ್ತಾರೆ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗುವ ಬಗ್ಗೆ ಹೇಳಲ್ಲ. ಮೊದಲು ಡಿಕೆ ಶಿವಕುಮಾರ್ ಮತ್ತು  ಸಿದ್ಧರಾಮಯ್ಯರನ್ನ ಬಂಧಿಸಬೇಕು.  ಈ ಬಗ್ಗೆ ಚುನಾವಣಾ ಆಯೋಗಕ್ಕೆ ನಾನು ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ಕಾಂಗ್ರೆಸ್ ​​ನದ್ದು ರಾಷ್ಟ್ರ ದ್ರೋಹಿ ಪ್ರಣಾಳಿಕೆ. ಕಾಂಗ್ರೆಸ್​​ ಕೂಡಲೇ ಈ ಪ್ರಣಾಳಿಕೆಯನ್ನು ಹಿಂಪಡೆಯಬೇಕು ಕಾಂಗ್ರೆಸ್​ ಸರ್ಕಾರ  ಪಿಎಫ್ ಐ ಮೇಲಿದ್ದ 173 ಪ್ರಕರಣ​ ಹಿಂಪಡೆದಿದೆ. ದೇಶದಲ್ಲಿ ಪಿಎಫ್ಐ ಬ್ಯಾನ್ ಆಗಿದೆ ಅನ್ನೋದೆ ಕಾಂಗ್ರೆಸ್​ಗೆ ಗೊತ್ತಿಲ್ಲ. ಭಜರಂಗದಳ ಮುಟ್ಟಿದ್ದರಿಂದ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳುತ್ತೆ ಎಂದರು.

Key words: Former DCM- KS Eshwarappa- burnt- Congress –manifesto-  copy