ನನ್ನ ಹೆಣ ಕೂಡ ಬಿಜೆಪಿ ಕಚೇರಿ ಮುಂದೆ ಹೋಗಲ್ಲ: ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ.

ಬೆಂಗಳೂರು,ಏಪ್ರಿಲ್,14,2023(www.justkannada.in):  ಅಥಣಿ ಬಿಜೆಪಿ ಟಿಕೆಟ್ ನೀಡದ ಹಿನ್ನೆಲೆ ಅಸಮಾಧಾನಗೊಂಡು ಬಿಜೆಪಿ ತೊರೆದು ಕಾಂಗ್ರೆಸ್ ಸೇರಲು ನಿರ್ಧರಿಸಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಇಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಸರ್ಕಾರಿ ನಿವಾಸಕ್ಕೆ ಭೇಟಿ ನೀಡಿದ ಲಕ್ಷ್ಮಣ್ ಸವದಿ ಬಿಜೆಪಿ  ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.   ಸಭಾಪತಿ ಹೊರಟ್ಟಿಗೆ ರಾಜೀನಾಮೆ ಪತ್ರ ರವಾನಿಸಿದರು.

ಬಳಿಕ ಮಾತನಾಡಿದ ಲಕ್ಷ್ಮಣ್ ಸವದಿ, ನನ್ನ ರಾಜೀನಾಮೆ ಅಂಗೀಕಾರಾಗಿದೆ. ಬಿಜೆಪಿಗೂ ನನಗೂ ಸಂಬಂಧವಿಲ್ಲ. ನನ್ನ ಹೆಣ ಕೂಡ ಬಿಜೆಪಿ ಕಚೇರಿ ಮುಂದೆ ಹೋಗಲ್ಲ.  ನಾನು ರಾಹುಲ್ ಗಾಂಧಿ ಭೇಟಿಯಾಗುವ ಅವಶ್ಯಕತೆ ಇಲ್ಲ.  ನಾನು ರಾಜ್ಯದ ನಾಯಕರ ಜೊತೆಯೇ ಇರುತ್ತೇನೆ.  ನಮ್ಮ ಕ್ಷೇತ್ರದಲ್ಲಿ ಕೆಲಸ ಮಾಡಿಕೊಂಡು ಇರುತ್ತೇನೆ ನಾನು ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಬಿಜೆಪಿ ನಾಯಕರಿಗೆ ಟಾಂಗ್ ನೀಡಿದರು.

Key words:  Former DCM -Laxman Savadi -resigned – MLC-position