Tuesday, August 18, 2026

BDA Apartments

Home Front Page KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ED ಶಾಕ್: 21 ಕಡೆಗಳಲ್ಲಿ ದಾಳಿ, ಪರಿಶೀಲನೆ

KPSC ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ED ಶಾಕ್: 21 ಕಡೆಗಳಲ್ಲಿ ದಾಳಿ, ಪರಿಶೀಲನೆ

ಬೆಂಗಳೂರು,ಆಗಸ್ಟ್,18,2026 (www.justkannada.in):  ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್  ಗೆ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಶಿವಶಂಕರಪ್ಪ ಸಾಹುಕಾರ್, ಕೆಪಿಎಸ್‌ಸಿ ಕಚೇರಿ ಸೇರಿ 21 ಸ್ಥಳಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಕಡತವನ್ನ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಶಿವಶಂಕರಪ್ಪ ಸಾಹುಕಾರ್ ಅವರ ನಿವಾಸ, ಕೆಪಿಎಸ್ ಸಿ ಸದಸ್ಯೆ ಶಾಂತಾ ಹೊಸಮನಿ,  ಮಧ್ಯವರ್ತಿಗಳು ಪತ್ರಿಕೆ ಡಿಜಿಟಲ್ ಮೌಲ್ಯಮಾಪನ ಸಂಸ್ಥೆ  ಸೇರಿದಂತೆ ಆಯ್ಕೆಯಾದ ಕೆಲವು ಅಭ್ಯರ್ಥಿಗಳ ಮನೆ ಮೇಲೂ ಇಡಿ ದಾಳಿ ನಡೆಸಿದೆ ಎನ್ನಲಾಗಿದೆ.

ಬೆಂಗಳೂರು  ಹಾಸನ, ಕಾರವಾರ ಕಲಬುರಗಿ ಬೆಳಗಾವಿ ಅಹಮದಾಬಾದ್ ಸೇರಿ  ಒಟ್ಟು 21 ಸ್ಥಳಗಳಲ್ಲಿ ದಾಳಿ ಮಾಡಿ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಪಶು ವೈದ್ಯಾಧಿಕಾರಿಗಳ  ನೇಮಕ ಅಕ್ರಮ ಸಂಬಂಧ ಪ್ರತಿ ಅಭ್ಯರ್ಥಿಯಿಂದ 70 ರಿಂದ 80 ಲಕ್ಷ ರೂ ಲಂಚ ಪಡೆದ ಆರೋಪ ಕೇಳಿ ಬಂದಿತ್ತು. ಈ ಕುರಿತು ನಾಲ್ಕು ಪ್ರತ್ಯೇಕ ಎಫ್ ಐಆರ್ ದಾಖಲಾಗಿದೆ.

Key words: Former KPSC President, Shivashankarappa Sahukar, ED, Raids