Monday, October 5, 2026

BDA Apartments

ಮತ್ತೆ ಜೆಡಿಎಸ್ ಪಕ್ಷ ವಿಸರ್ಜನೆ ಮಾತುಗಳನ್ನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರ...
Home Front Page ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮಾಜಿ ಮೇಯರ್ ಸಂಪತ್ ರಾಜ್…

ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಮಾಜಿ ಮೇಯರ್ ಸಂಪತ್ ರಾಜ್…

ಬೆಂಗಳೂರು,ಡಿಸೆಂಬರ್,8,2020(www.justkannada.in):  ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿ ಜೈಲು ಸೇರಿರುವ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್  ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.logo-justkannada-mysore

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು  ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದರು. ಸಂಪತ್ ರಾಜ್ ಅವರಿಗೆ ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.former-mayor-sampath-raj-bail-appeal-high-court

ಸಂಪತ್ ರಾಜ್ ಜಾಮೀನು ಕೋರಿ ಸೆಷನ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಕೋರ್ಟ್  ಜಾಮೀನು ನೀಡಲು ನಿರಾಕರಿಸಿತ್ತು. ಈ ಹಿನ್ನೆಲೆ ಸಂಪತ್ ರಾಜ್ ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

Key words: former mayor –Sampath Raj- bail- appeal-High Court