ಮಾಜಿ ಮೇಯರ್ ಸಂಪತ್ ರಾಜ್ ಮತ್ತೆ ಸಿಸಿಬಿ ಕಸ್ಟಡಿಗೆ…

ಬೆಂಗಳೂರು,ನವೆಂಬರ್,19,2020(www.justkannada.in): ಡಿಜೆ.ಹಳ್ಳಿ ಮತ್ತು ಕೆಜಿ ಹಳ್ಳಿ ಗಲಾಟೆ ಕೇಸ್ ಹಾಗೂ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ದಾಳಿ ಮತ್ತು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಮತ್ತೆ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ.kannada-journalist-media-fourth-estate-under-loss

ಪ್ರಕರಣ ಸಂಬಂಧ ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಇಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಸಂಪತ್ ರಾಜ್ ಅವರ ವಿಚಾರಣೆ ನಡೆಸುವ ಅಗತ್ಯವಿದೆ. ಹೀಗಾಗಿ  ಸಂಪತ್ ರನ್ನು 10 ದಿನ ಕಸ್ಟಡಿಗೆ ನೀಡುವಂತೆ ಸಿಸಿಬಿ ಪರ ವಕೀಲರು ಮನವಿ ಮಾಡಿದ್ದರು. ಆದರೆ ಕೋರ್ಟ್ ಮತ್ತೆ ಒಂದು ಸಿಸಿಬಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ.

ನಾಳೆ ಮಧ್ಯಾಹ್ನ 1.30ರವರೆಗೆ ಸಂಪತ್ ರಾಜ್ ಅವರನ್ನ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆದೇಶ ಹೊರಡಿಸಿದೆ.

Key words: Former mayor -Sampath Raj –ccb- custody