ಬಿಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ  ಮಾಜಿ ಸಚಿವ ಆನಂದ್ ಸಿಂಗ್

 ವಿಜಯನಗರ,ಜುಲೈ,15,2023(www.justkannada.in): ಮಾಜಿ ಸಚಿವ ಆನಂದ್ ಸಿಂಗ್ ಬಿಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಳ್ಳಾರಿ ಮತ್ತು ವಿಜಯನಗರ ಅವಳಿ ಜಿಲ್ಲೆಯ ಪ್ರತಿಷ್ಠಿತ  ಬಿಡಿಸಿಸಿ ಬ್ಯಾಂಕ್​ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ವೈಯಕ್ತಿಕ ಕಾರಣ ನೀಡಿ ರಾಜೀನಾಮೆ ಸಲ್ಲಿಸಿದ್ದಾರೆ ಎನ್ನಲಾಗಿದೆ.

ಜುಲೈ 1ರಿಂದಲೇ ಅನ್ವಯ ಆಗುವಂತೆ ಆನಂದ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಗ್ರಾಮೀಣ ಭಾಗದ ರೈತರ ಅನುಕೂಲಕ್ಕೆ ಸ್ಥಾಪಿಸಿರುವ ಸಹಕಾರಿ ಬ್ಯಾಂಕ್​ಗೆ 100 ವರ್ಷದ ಇತಿಹಾಸ ಹೊಂದಿದೆ.

Key words: Former minister -Anand Singh – resigned – chairman -BDCC Bank