ಮಾಜಿ ಸಚಿವ ಬಿ. ನಾಗೇಂದ್ರಗೆ ಎಸ್ ಐಟಿ ಮತ್ತೆ ನೋಟಿಸ್

ಬೆಂಗಳೂರು,ಜುಲೈ,10,2024 (www.justkannada.in):  ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಎಸ್ ಐಟಿ ಮತ್ತೆ ನೋಟಿಸ್ ಜಾರಿ ಮಾಡಿದೆ.

ನಾಳೆ ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಬಿ.ನಾಗಂದ್ರರಿಗೆ ಎಸ್ ಐಟಿ ನೋಟಿಸ್ ಜಾರಿ ಮಾಡಿದೆ. ಇಂದು ವಿಚಾರಣೆಗೆ ಗೈರಾದ ಹಿನ್ನೆಲೆ ನೋಟಿಸ್ ಜಾರಿ ಮಾಡಿದೆ. ಅಲ್ಲದೆ  ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಗೂ ವಿಚಾರಣೆಗೆ ಹಾಜರಾಗುವಂತೆ ಮತ್ತೆ ನೋಟಿಸ್ ಕೊಟ್ಟಿದೆ.

ಹಗರಣ ಸಂಬಂಧ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಇಂದು ಬಿ.ನಾಗಂದ್ರ ಮತ್ತು ಬಸನಗೌಡ ದದ್ದಲ್ ಇಬ್ಬರ ನಿವಾಸ ಕಚೇರಿ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಿತ್ತು.

Key words: Former Minister, B.Nagendra, SIT, notice