Monday, August 31, 2026

BDA Apartments

Home Front Page ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಕಣ್ಣೀರಿಟ್ಟ ಮಾಜಿ ಸಚಿವ ಬಿ.ನಾಗೇಂದ್ರ

ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಕಣ್ಣೀರಿಟ್ಟ ಮಾಜಿ ಸಚಿವ ಬಿ.ನಾಗೇಂದ್ರ

ಬಳ್ಳಾರಿ, ಅಕ್ಟೋಬರ್,17,2024 (www.justkannada.in): ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಹಗರಣ ಸಂಬಂಧ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ವೇಳೆ ಮಾಜಿ ಸಚಿವ ಬಿ. ನಾಗೇಂದ್ರ ಕಣ್ಣೀರು ಹಾಕಿದ್ದಾರೆ.

ಇಂದು ಬಳ್ಳಾರಿಯಲ್ಲಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಬಿ.ನಾಗೇಂದ್ರ, ನಾನು ಯಾವುದೇ ತಪ್ಪು ಮಾಡಿಲ್ಲ ಇದೆಲ್ಲ ಸುಳ್ಳು ಆರೋಪ. ಸಣ್ಣ ದೋಷ ಇಲ್ಲದೆ ಹೊರ ಬರುತ್ತೇನೆ. ಪರಪ್ಪನ ಅಗ್ರಹಾರದ ಜೈಲಿನ ಗೋಡೆಯ ಮೇಲೆ ಬಿಜೆಪಿ ನಾಯಕರ ಹೆಸರು ಬರೆದು ಬಂದಿದ್ದೇನೆ. ಅವರೆಲ್ಲ ಜೈಲು ಪಾಲಾಗುತ್ತಾರೆ ನೋಡುತ್ತಾ ಇರಿ.  ನನ್ನ ವಿರುದ್ಧ ಷಡ್ಯಂತರ ಆಗಿದೆ ಎಂದು ಕಣ್ಣೀರು ಹಾಕಿದರು.

ನಾನು ಅಕ್ರಮ ಮಾಡಿದ್ದೇನೆ ಎಂದು ನಂಬಿದ್ದಾರೆ. ನಾನು ಯಾರನ್ನು ನಂಬಿಸಬೇಕಿಲ್ಲ. ಈ ಸುಳ್ಳಿನ ಪ್ರಪಂಚದಲ್ಲಿ ಕೆಟ್ಟ ಕೆಲಸಕ್ಕೆ ಮುಂದಾಗಿದ್ದಾರೆ. ನಾನು ಹಲವಾರು ಬಾರಿ ಜೈಲು ನೋಡಿದ್ದೇನೆ. ಒಂದು ಸೋಲಿನಿಂದ ನನ್ನ ಮೇಲೆ ಗೂಬೆ ಕೂರಿಸಿದ್ದರಲ್ಲ. ಹಗರಣ ಅಂತ ಬಿಜೆಪಿಯ ಯಾರ್ಯಾರು ಮಾತಾಡುತ್ತಿದ್ದಾರಲ್ಲ. ಅವರ ಹೆಸರು ಜೈಲಿನ ಗೋಡೆಯ ಮೇಲೆ ಬರೆದು ಬಂದಿದ್ದೇನೆ. ಅವರೆಲ್ಲ ಜೈಲು ಪಾಲಾಗುತ್ತಾರೆ  ಎಂದರು.

Key words: Former minister, B. Nagendra, tears, Valmiki Jayanti