ಮಾಜಿ ಸಚಿವ ಬಿ.ಸಿ ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆಗೆ ಶರಣು

ದಾವಣಗೆರೆ,ಜುಲೈ,8,2024 (www.justkannada.in): ಮಾಜಿ ಸಚಿವ ಬಿ.ಸಿ ಪಾಟೀಲ್ ಅವರ ಅಳಿಯ ಕೆ.ಜಿ ಪ್ರತಾಪ್ ಕುಮಾರ್(41) ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ನಡೆದಿದೆ.

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕಿನ ಅರಕೆರೆ ಬಳಿ ಪ್ರತಾಪ್ ಕುಮಾರ್ ವಿಷ ಸೇವಿಸಿದ್ದಾರೆ. ಶಿವಮೊಗ್ಗ- ಹರಿಹರ ರಾಜ್ಯ ಹೆದ್ದಾರಿಯಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ ಪ್ರತಾಪ್ ಕುಮಾರ್ ವಿಷ ಸೇವಿಸಿದ್ದು ತಕ್ಷಣ ಸ್ಥಳೀಯರು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ನಂತರ ಹೆಚ್ಚಿನ ಚಿಕಿತ್ಸೆಗಾಗಿ ಪ್ರತಾಪ್ ಕುಮಾರ್ ರನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರತಾಪ್ ಕುಮಾರ್ ಅವರು ಬಿ.ಸಿ ಪಾಟೀಲ್  ಪುತ್ರಿ ಸೌಮ್ಯ ಅವರ ಪತಿ.

Key words: Former Minister, B.S. Patil, son-in-law, suicide