Monday, September 14, 2026

BDA Apartments

Home Front Page ಕೆಪಿಸಿಸಿ ಅಧ್ಯಕ್ಷರಾಗಿ ಮಾಜಿ ಸಚಿವ ಡಿ. ಕೆ ಶಿವಕುಮಾರ್ ನೇಮಕ ಹಿನ್ನೆಲೆ: ಮೈಸೂರಿನಲ್ಲಿ ‘ಕೈ’ ಕಾರ್ಯಕರ್ತರ...

ಕೆಪಿಸಿಸಿ ಅಧ್ಯಕ್ಷರಾಗಿ ಮಾಜಿ ಸಚಿವ ಡಿ. ಕೆ ಶಿವಕುಮಾರ್ ನೇಮಕ ಹಿನ್ನೆಲೆ: ಮೈಸೂರಿನಲ್ಲಿ ‘ಕೈ’ ಕಾರ್ಯಕರ್ತರ ಸಂಭ್ರಮಾಚರಣೆ

ಮೈಸೂರು,ಮಾ,11,2020(www.justkannada.in): ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಮಾಜಿ ಸಚಿವ ಡಿ. ಕೆ ಶಿವಕುಮಾರ್ ನೇಮಕವಾದ ಹಿನ್ನೆಲೆ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

ಮೈಸೂರಿನ ರೈಲ್ವೆ ನಿಲ್ದಾಣದ ಬಳಿಯಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿಗಳನ್ನು ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು. ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆ ಶಿವಕುಮಾರ್ ಭಾವಚಿತ್ರ ಹಿಡಿದು ಅಭಿಮಾನಿಗಳು ಜೈ ಕಾರ ಕೂಗಿದರು.  ಕಾಂಗ್ರೆಸ್ ಪಕ್ಷದ ಸ್ಥಳೀಯ ಮುಖಂಡರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದರು.

ಕೆಪಿಸಿಸಿ ನೂತನ ಅಧ್ಯಕ್ಷರನ್ನಾಗಿ ಡಿ.ಕೆ ಶಿವಕುಮಾರ್ ಅವರನ್ನ ನೇಮಿಸಿ ಎಐಸಿಸಿ ಇಂದು ಅಧಿಕೃತ ಪ್ರಕಟಣೆ ಹೊರಡಿಸಿದೆ. ಹಾಗೆಯೇ  ಮಾಜಿ ಸಿಎಂ ಸಿದ್ಧರಾಮಯ್ಯರನ್ನ ವಿಪಕ್ಷ ನಾಯಕ ಹಾಗೂ ಸಿಎಲ್ ಪಿ ನಾಯಕರನ್ನಾಗಿ ಮುಂದುವರೆಸಿದೆ.

Key words: Former minister- D.K Shivakumar -KPCC president-Celebration –Mysore-congress