ನನ್ನ ಪ್ರಾಣ ಹೋದ್ರೂ ಸರಿ ಮೆಡಿಕಲ್ ಕಾಲೇಜು ಬಿಟ್ಟುಕೊಡುವುದಿಲ್ಲ- ಮಾಜಿ ಸಚಿವ ಡಿ.ಕೆ ಶಿವಕುಮಾರ್..

ಬೆಂಗಳೂರು,ಅ,29,2019(www.justkannada.in):  ಕನಕಪುರದಿಂದ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಸ್ಥಳಾಂತರಕ್ಕೆ ಮುಂದಾಗಿರುವ ಬಿಎಸ್ ವೈ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಸಿಡಿದೆದ್ದಿದ್ದಾರೆ.

ನನ್ನ ಪ್ರಾಣ ಹೋದರೂ ಸರಿ ಯಾವುದೇ ಕಾರಣಕ್ಕೂ ಕನಕಪುರದಿಂದ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಸ್ಥಳಾಂತರ ಮಾಡಲು ಬಿಡುವುದಿಲ್ಲ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಜೆಡಿಎಸ್ ಮತ್ತು ಕಾಂಗ್ರೆಸ್ ಮೈತ್ರಿ ಸರ್ಕಾರದ ವೇಳೆ ಮೆಡಿಕಲ್ ಕಾಲೇಜು ಕನಕಪುರದಲ್ಲಿ ನಿರ್ಮಾಣ ಮಾಡಲು ಒಪ್ಪಿಗೆ ಸೂಚಿಸಲಾಗಿತ್ತು. ಆದ್ರೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇದೀಗ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರ ಮಾಡಲು ಮುಂದಾಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿ ಬಿಜೆಪಿ ಸರ್ಕಾರದ ವಿರುದ್ದ ಗುಡುಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್,  ವಿಧಾನಸೌಧದಲ್ಲೇ ನನ್ನ ಪ್ರಾಣ ಹೋದ್ರೂ, ಕನಕಪುರದಿಂದ ಮೆಡಿಕಲ್ ಕಾಲೇಜು ಸ್ಥಳಾಂತರಕ್ಕೆ ಅವಕಾಶ ಮಾಡಿಕೊಡುವುದಿಲ್ಲ. ಸಮ್ಮಿಶ್ರ ಸರ್ಕಾರದ ವೇಳೆಯಲ್ಲಿಯೇ ಕನಕಪುರದಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ತೀರ್ಮಾನಿಸಲಾಗಿತ್ತು.  ಆಸಮಯದಲ್ಲೇ ಕಾಲೇಜು ನಿರ್ಮಾಣಕ್ಕೆ ಅನುಮತಿ ದೊರೆತಿದ್ದರೇ, ಈ ವೇಳೆಗಾಗಲೇ ನಿರ್ಮಾಣ ಕಾರ್ಯ ಕೂಡ ಆರಂಭವಾಗುತ್ತಿತ್ತು ಎಂದರು.

ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿರುವ ಮೆಡಿಕಲ್ ಕಾಲೇಜುಗಳಲ್ಲಿ ಒಂದು ಕಾಲೇಜನ್ನು ಈ ಹಿಂದೆಯೇ ತೀರ್ಮಾನಿಸಿದಂತೆ ಕನಕಪುರದಲ್ಲಿ ನಿರ್ಮಾಣ ಮಾಡಬೇಕು. ಆದ್ರೇ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಿಕ್ಕಬಳ್ಳಾಪುರದಲ್ಲಿ ನಿರ್ಮಾಣ ಮಾಡಲು ಸ್ಥಳಾಂತರದ ತೀರ್ಮಾನ ಮಾಡಿದ್ದಾರೆ. ವಿಧಾನಸೌಧದಲ್ಲಿಯೇ ನನ್ನ ಪ್ರಾಣ ಹೋದರೂ ಪರವಾಗಿಲ್ಲ ಕನಕಪುರದಿಂದ ಮೆಡಿಕಲ್ ಕಾಲೇಜು ಸ್ಥಳಾಂತರಕ್ಕೆ ಬಿಟ್ಟುಕೊಡುವುದಿಲ್ಲ ಎಂದು ಡಿ.ಕೆ ಶಿವಕುಮಾರ್ ಹೇಳಿದರು.

Key words: Former Minister- DK Shivakumar – – medical college-kanakapura-chikkaballapura