ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಒಲಿದ ಕೆಪಿಸಿಸಿ ಅಧ್ಯಕ್ಷ ಪಟ್ಟ…..

ಬೆಂಗಳೂರು,ಮಾ,11,2020(www.justkannada.in):  ರಾಜ್ಯಕಾಂಗ್ರೆಸ್ ನಲ್ಲಿ ಕಗ್ಗಂಟಾಗಿ ಪರಿಣಮಿಸಿದ್ದ ಕೆಪಿಸಿಸಿ ಅಧ್ಯಕ್ಷ ನೇಮಕಕ್ಕೆ ಕೊನೆಗೂ ತೆರೆ ಬಿದ್ದಿದೆ. ಮಾಜಿ ಸಚಿವ ಡಿ.ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷಗಿರಿ ಒಲಿಸಿಕೊಳ್ಳುವಲ್ಲಿ ಸಫಲರಾಗಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾಗಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ನೇಮಕವಾಗಿದ್ದಾರೆ. ಹಾಗೆಯೇ ಮಾಜಿ ಸಿಎಂ ಸಿದ್ದರಾಮಯ್ಯರನ್ನ ಸಿಎಲ್ ಪಿ ನಾಯಕ ಮತ್ತು ವಿಪಕ್ಷ ನಾಯಕ ಎರಡು ಸ್ಥಾನಗಳಲ್ಲಿ ಮುಂದುವರೆಯಲಿದ್ದಾರೆಂದು  ಕಾಂಗ್ರೆಸ್ ಹೈಕಮಾಂಡ್ ಪ್ರಕಟಣೆ ಹೊರಡಿಸಿದೆ.former minister -DK Sivakumar-Appoint- KPCC president

ಈ ಮಧ್ಯೆ ರಾಜ್ಯ ಕಾಂಗ್ರೆಸ್ ಗೆ ಮೂವರು  ಕಾರ್ಯಾಧ್ಯಕ್ಷರನ್ನ ನೇಮಕ ಮಾಡಲಾಗಿದ್ದು ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಆಹ್ಮದ್ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ.

Key words: former minister -DK Sivakumar-Appoint- KPCC president