ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…

ನವದೆಹಲಿ,ಅ,14,2019(www.justkannada.in):  ಅಕ್ರಮ ಹಣ ವರ್ಗಾವಣೆ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನ ನವದೆಹಲಿ ಹೈಕೋರ್ಟ್ ನಾಳೆಗೆ ಮುಂದೂಡಿದೆ.

ಇಡಿ ಕೋರ್ಟ್  ಜಾಮೀನು ನೀಡಲು ನಿರಾಕರಿಸಿದ ಹಿನ್ನೆಲೆ ಮಾಜಿ ಸಚಿವ ಡಿ,ಕೆ ಶಿವಕುಮಾರ್ ಜಾಮೀನು ಕೋರಿ ನವದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ನಡೆಯಬೇಕಿತ್ತು. ಆದರೆ ಡಿ.ಕೆ ಶಿವಕುಮಾರ್ ಪರ ಹಿರಿಯ ವಕೀಲರಾದ ಅಭಿಷೇಕ್ ಮನು ಸಿಂಘ್ವಿ ಕೋರ್ಟ್ ಗೆ ಆಗಮಿಸದ ಹಿನ್ನೆಲೆ ವಿಚಾರಣೆ ನಾಳೆಗೆ ಮುಂದೂಡುವಂತೆ ಡಿಕೆಶಿ ಪರ ಇನ್ನತರ ವಕೀಲರು ಮನವಿ ಮಾಡಿದರು.

ಈ ಹಿನ್ನೆಲೆ  ನವದೆಹಲಿ ಹೈಕೋರ್ಟ್ ವಿಚಾರಣೆಯನ್ನ ನಾಳೆ ಮಧ್ಯಾಹ್ನ 3.30ಕ್ಕೆ ಮುಂದೂಡಿದೆ. ಇನ್ನು ಇಡಿ ಅಧಿಕಾರಿಗಳು ತನಿಖಾ ಪ್ರಗತಿ ವರದಿಯನ್ನ ಕೋರ್ಟ್ ಗೆ ಸಲ್ಲಿಸಿದರು. ನಾಳೆ ಡಿ.ಕೆ ಶಿವಕುಮಾರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಲಿದ್ದಾರೆ. ಗುರುವಾರ ಮತ್ತು ಶುಕ್ರವಾರ ಇಡಿ ಪರ ವಕೀಲರು ವಾದ ಮಂಡಿಸುವ ಸಾಧ್ಯತೆ ಇದೆ.

Key words: Former Minister- DK Sivakumar- bail application- postponed – tomorrow