ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ…

ನವದೆಹಲಿ,ಸೆ,17,2019(www.justkannada.in): ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ.

ಇಂದು ಮಾಜಿ ಸಚಿವ ಡಿ.ಕೆ ಶಿವಕುಮಾರ್ ಇಡಿ ಕಸ್ಟಡಿ ಅಂತ್ಯವಾದ ಹಿನ್ನೆಲೆ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಡಿಕೆ. ಶಿವಕುಮಾರ್ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಗೂ ಇಡಿ ಪರ ವಕೀಲರಾದ ನಟರಾಜ್ ಅವರು ವಾದ ಮಂಡಿಸಿದರು.

ವಾದ ಪ್ರತಿವಾದ ಆಲಿಸಿದ ಕೋರ್ಟ್ ಜಾಮೀನು ಅರ್ಜಿ ವಿಚಾರಣೆಯನ್ನ ನಾಳೆಗೆ ಮುಂದೂಡಿದೆ. ಅಲ್ಲದೆ ನಾಳೆವರೆಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರನ್ನ ಆರ್.ಎಂ ಎಲ್ ಆಸ್ಪತ್ರೆಯಲ್ಲಿಡಲು ಜಡ್ಜ್ ಆದೇಶಿಸಿದರು. ಡಿಕೆಶಿ ಅವರನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಎಂದು ನ್ಯಾಯಾಧೀಶರು ಆದೇಶಿಸಿದ್ದು  ನಾಳೆವರೆಗೆ ಕೋರ್ಟ್ ಸೂಚನೆ ಪಾಲಿಸುವಂತೆ ಸೂಚನೆ ನೀಡಿದ್ದಾರೆ.

Key words: Former Minister -DK Sivakumar- bail application -postponed – tomorrow