Sunday, August 23, 2026

BDA Apartments

Home Front Page ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನಕ್ಕೆ ಖಂಡನೆ: ರಕ್ತದಾನದ ಮೂಲಕ ಕಾಂಗ್ರೆಸ್ ವಿನೂತನ ಪ್ರತಿಭಟನೆ…

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನಕ್ಕೆ ಖಂಡನೆ: ರಕ್ತದಾನದ ಮೂಲಕ ಕಾಂಗ್ರೆಸ್ ವಿನೂತನ ಪ್ರತಿಭಟನೆ…

ಮಂಡ್ಯ,ಸೆ,11,2019(www.justkannada.in): ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಇಂದು ಬೆಂಗಳೂರಿನಲ್ಲಿ ಒಕ್ಕಲಿಗ ಸಮುದಾಯದಿಂದ ಬೃಹತ್ ಪ್ರತಿಭಟನಾ ರ್ಯಾಲಿ ಆಯೋಜಿಸಿದೆ.  ಈ ನಡುವೆ ಮಂಡ್ಯ ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಕ್ತದಾನದ ಮೂಲಕ ವಿನೂತನ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಡ್ಯದ ಜಿಲ್ಲಾಧಿಕಾರಿ ಬಳಿ ಕಾಂಗ್ರೆಸ್ ಕಾರ್ಯಕರ್ತರು ರಕ್ತದಾನ ಮಾಡುವ ಮೂಲಕ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ಸುಮಾರು 50ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್ ಕಾರ್ಯಕರ್ತರು ರಕ್ತದಾನ ಮಾಡುವ ಮೂಲಕ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.

ಇನ್ನು ಇಂದು ಒಕ್ಕಲಿಗ ಸಮುದಾಯ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಿಂದ ಫ್ರೀಡಂಪಾರ್ಕ್ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಆಯೋಜಿಸಿದೆ.

Key words: Former minister- DK Sivakumar -condemns –arrest-Congress- donating –blood-mandya