Sunday, August 30, 2026

BDA Apartments

Home Front Page ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಿಡುಗಡೆಗೆ ಆಗ್ರಹ: ಮುಂದುವರೆದ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ…

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಿಡುಗಡೆಗೆ ಆಗ್ರಹ: ಮುಂದುವರೆದ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ…

ರಾಮನಗರ,ಸೆ,13,2019(www.justkannada.in):  ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ರನ್ನ ಬಿಡುಗಡೆ ಮಾಡುವಂತೆ ಆಗ್ರಹಿಸಿ ಸ್ವಕ್ಷೇತ್ರ ಕನಕಪುರದಲ್ಲಿ ಡಿಕೆಶಿ ಅಭಿಮಾನಿಗಳು ಪ್ರತಿಭಟನೆ ಮುಂದುವರೆಸಿದ್ದಾರೆ.

ಕನಕಪುರದ ನಗರ ಸಭೆ ಕಚೇರಿ ಮುಂಭಾಗ ಕಾಂಗ್ರೆಸ್ ಜೆಡಿಎಸ್ ಕಾರ್ಯಕರ್ತರು ಶಾಂತಿಯುತ ಧರಣಿ ನಡೆಸುತ್ತಿದ್ದು,ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಇದೇ ವೇಳೆ ಪ್ರಧಾನಿ ಮೋದಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ವಿವಿಧ ಸಂಘಟನೆ ಸದಸ್ಯರು ಪಾಲ್ಗೊಂಡಿದ್ದು, ಡಿ.ಕೆ ಶಿವಕುಮಾರ್ ಬಿಡುಗಡೆ ಮಾಡುವವರೆಗೂ ಹೋರಾಟ ಮುಂದುವರೆಸಲು ನಿರ್ಧರಿಸಿದ್ದಾರೆ.

ಇನ್ನು ಇಂದು ಡಿ.ಕೆ ಶಿವಕುಮಾರ್ ಬಿಡುಗಡೆಯಾಗುವ ವಿಶ್ವಾಸವಿದೆ. ಬಿಡುಗಡೆಯಾಗದಿದ್ದರೇ ಉಗ್ರ ಹೋರಾಟ ಮಾಡುತ್ತೇವೆ. ದೆಹಲಿ ಚಲೋ ನಡೆಸುತ್ತೇವೆ ಎಂದು ಕೇಂದ್ರ ಸರ್ಕಾರಕ್ಕೆ ಡಿ.ಕೆ ಶಿವಕುಮಾರ್ ಬೆಂಬಲಿಗರು ಎಚ್ಚರಿಕೆ ನೀಡಿದ್ದಾರೆ.

Key words: Former minister -DK Sivakumar –demands- release-protest