Friday, September 11, 2026

BDA Apartments

Home Front Page ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಯಾದ ಮಾಜಿ ಸಚಿವ ಡಿ.ಕೆ ಶಿವಕುಮಾರ್…..

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಯಾದ ಮಾಜಿ ಸಚಿವ ಡಿ.ಕೆ ಶಿವಕುಮಾರ್…..

ನವದೆಹಲಿ,ಅ,24,2019(www.justkannada.in):  ಜಾಮೀನು ಪಡೆದು ತಿಹಾರ್ ಜೈಲಿನಿಂದ ಬಿಡುಗಡೆಯಾದ ಬಳಿಕ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಇಂದು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನ ಭೇಟಿಯಾಗಿದ್ದಾರೆ.

ನವದೆಹಲಿಯ ಜನಪಥ್ ರಸ್ತೆಯಲ್ಲಿರುವ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಿವಾಸಕ್ಕೆ ಡಿ.ಕೆ ಶಿವಕುಮಾರ್ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ. ಡಿ.ಕೆ ಶಿವಕುಮಾರ್ ಗೆ ಸಹೋದರ ಡಿ.ಕೆ ಸುರೇಶ್ , ರಂಗನಾಥ್ , ರವಿ ಸಾಥ್ ನೀಡಿದ್ದಾರೆ. ಇದಕ್ಕೂ ಮೊದಲು  ಎಐಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರನ್ನ ಭೇಟಿಯಾಗಿದ್ದರು.

ಇನ್ನು ಮಾಜಿ ಸಚಿವ ಡಿ.ಕೆ ಶಿವಕುಮಾರ್ ನಾಳೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎನ್ನಲಾಗುತ್ತಿತ್ತು. ಆದರೆ ನಾಳೆ ಅವರು ದೆಹಲಿಯಲ್ಲೇ ಉಳಿಯಲಿದ್ದು ಶನಿವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ ಎನ್ನಲಾಗುತ್ತಿದೆ.

Key words: Former minister-DK Sivakumar- meets -AICC president-Sonia Gandhi.