Sunday, August 30, 2026

BDA Apartments

Home Front Page ಮಾಜಿ ಸಚಿವ ಡಿ.ಕೆ ಶಿವಕುಮಾರ್ ತಾಯಿ ಗೌರಮ್ಮಗೂ ಇಡಿ ಸಮನ್ಸ್….

ಮಾಜಿ ಸಚಿವ ಡಿ.ಕೆ ಶಿವಕುಮಾರ್ ತಾಯಿ ಗೌರಮ್ಮಗೂ ಇಡಿ ಸಮನ್ಸ್….

ಬೆಂಗಳೂರು ,ಅ,14,2019(www.justkannada.in):  ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಮತ್ತು ಸಹೋದರ ಡಿ.ಕೆ ಸುರೇಶ್ ಗೆ ಇಡಿ ಸಮನ್ಸ್ ನೀಡಿ ವಿಚಾರಣೆ ನಡೆಸಿದ ಬೆನ್ನಲ್ಲೆ ಇದೀಗ ಅವರ ತಾಯಿ ಗೌರಮ್ಮಗೂ ಸಮನ್ಸ್ ನೀಡಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್  ನ್ಯಾಯಾಂಗ ಬಂಧನದಲ್ಲಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್ ಸಹೋದರ  ಡಿ.ಕೆ ಸುರೇಶ್ ಮತ್ತು ಪುತ್ರಿ  ವಿಚಾರಣೆಗೆ ಹಾಜರಾಗಿದ್ದರು.  ಇದೀಗ ಡಿ.ಕೆ ಶಿವಕುಮಾರ್ ತಾಯಿ ಗೌರಮ್ಮಗೂ ನಾಳೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ಜಾರಿ ಮಾಡಿದೆ.

ಈ ಕುರಿತು ಸಂಸದ ಡಿ.ಕೆ ಸುರೇಶ್ ಮಾಹಿತಿ ನೀಡಿದ್ದು, ನಮ್ಮ ತಾಯಿಗೂ ನಾಳೆ ವಿಚಾರಣೆಗೆ ಹಾಜರಾಗುವಂತೆ ಇಡಿ ಸಮನ್ಸ್ ನೀಡಿದೆ. ನಮ್ಮ ತಾಯಿಗೆ ವಯಸ್ಸಾಗಿದೆ. ನಾಳೆ ವಿಚಾರಣೆಗೆ ಹಾಜರಾಗುತ್ತಾರೋ ಇಲ್ಲವೋ ಗೊತ್ತಿಲ್ಲ ಎಂದು ಡಿ.ಕೆ ಸುರೇಶ್ ಹೇಳಿದರು.

 

Key words: Former minister- DK Sivakumar –mother- Gowramma- ED-summons